ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಎಲ್ಲ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಮತ್ತು ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿಗೂ ಏ.14ರವರೆಗೆ ರಜೆ ಮುಂದುವರಿಸಲಾಗಿದೆ.
ಈ ಮೊದಲು ಮಾರ್ಚ್ 31ರವರೆಗೆ ರಜೆ ನೀಡಿ ಆದೇಶ ಹೊರಡಿಸಲಾಗಿತ್ತು. ಆದರೆ, ಕರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದರಿಂದ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಶಿಕ್ಷಣ ಸಂಸ್ಥೆಗಳಿಗೂ ರಜೆವಿಸ್ತರಿಸಲಾಗಿದೆ ಎಂದು ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಏಪ್ರಿಲ್ 11ರವರೆಗೆ ರಜೆ ಘೋಷಿಸಿದ್ದು, ಏಪ್ರಿಲ್ 11ರ ನಂತರ ಬೇಸಿಗೆ ರಜೆ ಮುಂದುವರಿಯಲಿದೆ ಎಂದು ತಿಳಿಸಿದೆ. ಆದರೆ, ಶಿಕ್ಷಕರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚಿಸಿದೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ನೀಡಲಾಗಿರುವ ರಜೆಯಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು ಕೆಲ ಕಾರ್ಯಗಳನ್ನು ನಿರ್ವಹಿಸುವಂತೆ ಇಲಾಖೆ ಈ ಹಿಂದಯೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ಬೋಧನೆಗೆ ಅಗತ್ಯ ಸಾಮಗ್ರಿ ಸಿದ್ಧಪಡಿಸುವುದು, ವಿದ್ಯಾರ್ಥಿಗಳಿಗೆ ಆನ್ಲೈನ್ ಬೋಧನೆ ಹಾಗೂ ಕಲಿಕೆಗೆ ನೆರವಾಗುವುದು, ಎಲ್ಲಕ್ಕೂ ಮುಖ್ಯವಾಗಿ ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುರ್ತು ಕಾರ್ಯಗಳು ಎದುರಾದರೆ ಸಿದ್ಧವಾಗಿರುವಂತೆ ತಿಳಿಸಿದೆ. ಇದಕ್ಕಾಗಿ ಸಂಸ್ಥೆಯಲ್ಲಿ ಒಬ್ಬರನ್ನು ಕರೊನಾ ಸಮನ್ವಯ ಅಧಿಕಾರಿಯಾಗಿ ನೇಮಿಸುವಂತೆ ಸೂಚಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ