ಜಿನೀವಾ: ಕೋವಿಡ್-19 ಗೆ ವಿಶ್ವಾದ್ಯಂತ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದುವರೆಗೂ ಈ ಸೋಂಕಿನಿಂದಾಗಿ 47 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಸೋಂಕು ಎಲ್ಲೆಡೆ ಪಸರಿಸುತ್ತಿರುವುದು ವಿಶ್ವ ಆರೋಗ್ಯ ಸಂಸ್ಥೆ (WHO)ಗೂ ತಲೆನೋವಾಗಿ ಪರಿಣಮಿಸಿದೆ. ಕರೋನಾ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದರ ಬಗ್ಗೆ ಆತಂಕವಿರುವುದಾಗಿ WHO ತಿಳಿಸಿದೆ.
ಬುಧವಾರ ಕೊರೋನಾ ವೈರಸ್ ಹರಡುವಿಕೆ ಬಗ್ಗೆ ಮಾತನಾಡಿರುವ WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೇಯಾಸ್, ” COVID-19 ನಿಂದಾಗಿ ಸತ್ತವರ ಸಂಖ್ಯೆ ಕಳೆದ ಒಂದು ವಾರದಲ್ಲಿ ದ್ವಿಗುಣಗೊಂಡಿದೆ. ಮುಂದಿನ ಕೆಲ ದಿನಗಳಲ್ಲಿ ಸೋಂಕಿತರ ಸಂಖ್ಯೆ, 1 ಮಿಲಿಯನ್ ಮತ್ತು ಸತ್ತವರ ಸಂಖ್ಯೆ 50,000 ದಾಟಬಹುದು” ಎಂಬ ಆತಂಕಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಈ ದೇಶಗಳಲ್ಲಿ ಕೊರೋನಾ ಹಾವಳಿ:
ಈ ದೇಶಗಳಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ. ಇಟಲಿ, ಸ್ಪೇನ್ (Spain), ಜರ್ಮನಿ, ಫ್ರಾನ್ಸ್, ಬ್ರಿಟನ್, ಸ್ವಿಟ್ಜರ್ಲೆಂಡ್, ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ನಂತರ ಆಸ್ಟ್ರಿಯಾದಲ್ಲೂ ಕರೋನದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಆಸ್ಟ್ರಿಯಾ 10,000 ಕ್ಕೂ ಹೆಚ್ಚು ಕರೋನಾ ರೋಗಿಗಳನ್ನು ಹೊಂದಿರುವ ವಿಶ್ವದ ಒಂಬತ್ತನೇ ರಾಷ್ಟ್ರವಾಗಿದೆ.
ಸ್ಪೇನ್ನಲ್ಲಿ ಒಂದೇ ದಿನದಲ್ಲಿ 9,222 ಹೊಸ ಪ್ರಕರಣ:
ದೇಶದಲ್ಲಿ ಒಟ್ಟು ಕೊರೊನೊ ವೈರಸ್ ಪ್ರಕರಣಗಳ ಸಂಖ್ಯೆ 94,417ಕ್ಕೆ ಏರಿದೆ ಎಂದು ಸ್ಪ್ಯಾನಿಷ್ ಆರೋಗ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಾರ್ಚ್ 31 ರಂದು ಒಂದೇ ದಿನದಲ್ಲಿ 9,222 ಹೊಸ ಪ್ರಕರಣಗಳು ದಾಖಲಾಗಿದ್ದು, ಇದು ಹಿಂದಿನ ಎರಡು ದಿನಗಳಿಗಿಂತ ಹೆಚ್ಚಾಗಿದೆ. ದೇಶದಲ್ಲಿ ಇಲ್ಲಿಯವರೆಗೆ ಕರೋನವೈರಸ್ನಿಂದಾಗಿ 8,189 ರೋಗಿಗಳು ಸಾವನ್ನಪ್ಪಿದ್ದಾರೆ.
ಇಟಲಿ ಚಿಂತಾಜನಕ:
ಚೀನಾದಲ್ಲಿ ಪ್ರಾರಂಭವಾದ ಕರೋನಾವೈರಸ್ (Coronavirus) 200 ದೇಶಗಳಲ್ಲಿ ಪ್ರಭಾವಬೀರಿದ್ದು, ಸುಮಾರು 640,000 ಪ್ರಕರಣಗಳು ವರದಿಯಾಗಿವೆ. 10 ದೇಶಗಳಲ್ಲಿ 10,000ಕ್ಕೂ ಹೆಚ್ಚು ಮಂದಿ ಕೊರೋನಾ ಪೀಡಿತರಾಗಿದ್ದಾರೆ. ವಿಶೇಷವಾಗಿ ಇದು ಯೂರೋಪಿಯನ್ ದೇಶಗಳಲ್ಲಿ ಹೆಚ್ಚಾಗಿದೆ. ಇಟಲಿ (Italy)ಯ ಸ್ಥಿತಿಯಂತೂ ಚಿಂತಾಜನಕವಾಗಿದೆ. ಇಟಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದು ಲಕ್ಷದ 10 ಸಾವಿರ ದಾಟಿದ್ದು, 13 ಸಾವಿರ ಜನರು ಸಾವನ್ನಪ್ಪಿದ್ದಾರೆ.
ಜರ್ಮನಿ ಸ್ಥಿತಿ ಭಯಾನಕ
ಜರ್ಮನಿಯಲ್ಲಿ ಮಾರ್ಚ್ 31ರ ವೇಳೆಗೆ Covid-19 ಸೋಂಕಿಗೆ ಒಳಗಾದವರ ಸಂಖ್ಯೆ 61,913ಕ್ಕೆ ಏರಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೆಲಸ ಮಾಡುವ ಸರ್ಕಾರಿ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆಯಾದ ರಾಬರ್ಟ್ ಕೋಚ್ ಇನ್ಸ್ಟಿಟ್ಯೂಟ್ (ಆರ್ಕೆಐ) ಅಧ್ಯಕ್ಷ ಲೋಥರ್ ವಿಲ್ಲರ್ ಜರ್ಮನಿಯಲ್ಲಿ ಸಾವಿನ ಪ್ರಮಾಣ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ