janadhvani

Kannada Online News Paper

ಏ,14ಕ್ಕೆ ಲಾಕ್​ಡೌನ್ ಕೊನೆಗೊಳಿಸಲು ಸಾಧ್ಯವಿಲ್ಲ- ಪ್ರಧಾನಿ ಮೋದಿ

ನವದೆಹಲಿ,ಏ.08: ಕರೋನವೈರಸ್ ಪ್ರಕರಣಗಳ ತೀವ್ರತೆಯ ಮಧ್ಯೆ ಏಪ್ರಿಲ್ 14 ರಂದು ಲಾಕ್ ಡೌನ್ ನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಒಟ್ಟು 21 ದಿನಗಳ ಕಾಲ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಆದರೆ, ಲಾಕ್​ಡೌನ್​ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ​ ಬಾರದ ಹಿನ್ನೆಲೆಯಲ್ಲಿ ಲಾಕ್​ಡೌನ್​ಅನ್ನು ಏಪ್ರಿಲ್​ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಲಾಕ್​ಡೌನ್​ ಘೋಷಿಸಿ 14 ದಿನಗಳು ಕಳೆದರೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಮೃತಪಡುವವರು ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಏತನ್ಮಧ್ಯೆ, ಏಪ್ರಿಲ್ 14 ರ ನಂತರವೂ ಲಾಕ್​ಡೌನ್​ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್​ ಮುಂದುವರೆಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

COVID-19 ರ ನಂತರ ಜೀವನವು ಮತ್ತೆ ಒಂದೇ ಆಗುವುದಿಲ್ಲ, ಅದು ಪೂರ್ವ-ಕರೋನಾ ಮತ್ತು ನಂತರದ ಕರೋನಾ ಎನ್ನುವ ರೀತಿಯಲ್ಲಿ ಬದಲಾವಣೆಯಾಗಲಿದೆ ಎಂದು ಪ್ರಧಾನಿ ತಿಳಿಸಿದರು. ಇನ್ನು ಮುಂದುವರೆದು ಬೃಹತ್ ನಡವಳಿಕೆ, ಸಾಮಾಜಿಕ ಮತ್ತು ವೈಯಕ್ತಿಕ ಬದಲಾವಣೆಗಳು ಆಗಬೇಕಿದೆ” ಎಂದು ಪಿಎಂ ಮೋದಿ ರಾಜಕೀಯ ಮುಖಂಡರೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಪ್ರಕರಣಗಳ ಸಂಖ್ಯೆ 5,194 ಕ್ಕೆ ಏರಿದ್ದರಿಂದ ಕೊರೊನಾವೈರಸ್ ವಿರುದ್ಧದ ಹೋರಾಟದ ಕುರಿತು ಚರ್ಚಿಸಲು ಸಭೆ ನಡೆಸಲಾಯಿತು. ಆರೋಗ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಗ್ರಾಮೀಣ ವ್ಯವಹಾರಗಳ ಕಾರ್ಯದರ್ಶಿ ವಿವರವಾದ ಪ್ರಸ್ತುತಿಯನ್ನು ನೀಡಿದರು.

error: Content is protected !! Not allowed copy content from janadhvani.com