ಬಂಟ್ವಾಳ, ಎ. 9: ದೇಶಾದ್ಯಂತ ದೈನಂದಿನ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೊರೋನ ವೈರಸ್ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಸ್ಟೇಟಸ್ ಹಾಕಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜಿಪ ಮೂಡ ಗ್ರಾಮದ ಕಾರಾಜೆ ಎಸ್ಡಿಪಿಐ ಸದಸ್ಯ ಮುಹಮ್ಮದ್ ನಿಸಾರ್ ಎಂಬವರು ನೀಡಿದ ದೂರಿನಂತೆ ಬೋಳಿಯಾರ್ ಗ್ರಾಮದ ರಂತಡ್ಕ ವಡಕಿನಕಟ್ಟೆ ನಿವಾಸಿ ರಂಜನ್ ಪೂಜಾರಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂದಿರ, ಗುರುದ್ವಾರಗಳಿಂದ ದಾನ ಮಾಡುತ್ತಿದ್ದರೆ ಮಸೀದಿಗಳಿಂದ ಕೊರೋನ ಹಬ್ಬಿಸುವ ಕೆಲಸ ಆಗುತ್ತಿದೆ ಎಂದು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ ನಲ್ಲಿ ಹಾಕುವ ಮೂಲಕ ಒಂದು ಸಮುದಾಯವನ್ನು ನಿಂದಿಸಿದ್ದು ಅಲ್ಲದೆ ಇದು ಕೋಮು ಗಲಭೆಗೆ ಪ್ರಚೋದನೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿಯ ಸೃಷ್ಟಿಸುವ ಪ್ರಯತ್ನವಾಗಿದೆ. ಆದ್ದರಿಂದ ರಂಜನ್ ಪೂಜಾರಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಪ್ರಕರಣವನ್ನು ದಾಖಲಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್