ಮದೀನಾ,ಎ.10: ಕೊರೋನಾ ಬಾಧಿತರ ಸಂಖ್ಯೆ ಏರಿಕೆಯಾದ ಕಾರಣ ಮದೀನಾದಲ್ಲಿ ಹರಮ್ಗೆ ಹೊಂದಿಕೊಂಡಿರುವ ಆರು ಪ್ರಮುಖ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದ ಕರ್ಫ್ಯೂ ವಿಧಿಸಲಾಗಿದೆ.
ಹರಮ್ನ ಪಕ್ಕದಲ್ಲಿರುವ ಆರು ಜಿಲ್ಲೆಗಳ ನಿವಾಸಿಗಳು ತಮ್ಮ ಮನೆಗಳಿಂದ ಹೊರಡಬಾರದು, ಆಹಾರ ಸಾಮಗ್ರಿಗಳನ್ನು ತಮ್ಮ ಮನೆಗಳಿಗೇ ತಲುಪಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಪ್ರದೇಶಗಳಲ್ಲಿ ಕಳೆದ 24 ತಾಸುಗಳಲ್ಲಿ 78 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವೈರಸ್ ತಗುಲಿದ 19 ಮಂದಿ ಮೃತಪಟ್ಟಿದ್ದು, ಸೋಂಕು ತಗುಲಿದವರಲ್ಲಿ ಕೇವಲ ನಾಲ್ಕು ಮಂದಿ ಗುಣಮುಖರಾಗಿದ್ದಾರೆ.
ಕೆಳಗಿನ ನಕ್ಷೆಯ ಕೆಂಪು ಗಡಿಯೊಳಗೆ ಇರುವ ಪ್ರದೇಶಗಳ ಎಲ್ಲರಿಗೂ ಈ ಆದೇಶ ಅನ್ವಯಿಸುತ್ತದೆ.

ಇದು ಕುರ್ಬಾನ್, ಬನಿ ಝುಫರ್, ಶೂರೈಬಾತ್, ಜುಮುಆ ಬನೀಕುದ್ರಾ ಮತ್ತು ಇಸ್ಕಾನ್ನ ಒಂದು ಪ್ರದೇಶ ಒಳಗೊಂಡಿದೆ.ಈ ಹಿಂದೆ ಇಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು.
ಸಾರ್ವಜನಿಕರ ಆರೋಗ್ಯ ಮತ್ತು ರೋಗ ತಡೆಗಟ್ಟುವಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಕರ್ಫ್ಯೂ ಕಠಣಗೊಳಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ