janadhvani

Kannada Online News Paper

ರಾಜ್ಯದಲ್ಲಿ ಮುಂದುವರಿದ ಕೋವಿಡ್ ಆರ್ಭಟ-ಒಂದೇ ದಿನದಲ್ಲಿ 17 ಪಾಸಿಟಿವ್‌

ಬೆಂಗಳೂರು,ಏ 15:ಇಡೀ ಜಗತ್ತನ್ನೇ ತಲ್ಲಣಗೊಳಿಸರುವ ಮಹಾಮಾರಿ ಕೊರೋನಾ ಸೋಂಕಿನ ಹರಡುವಿಕೆಯನ್ನು ತಡೆಯಲು ದೇಶಾದ್ಯಂತ ಲಾಕ್ಡೌನ್ ಮುಂದುವರಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟಕ್ಕೆ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಮಧ್ಯಾಹ್ನ 12ರವರೆಗೆ ಕರ್ನಾಟಕದಲ್ಲಿ 17 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆ ಒಂದರಲ್ಲಿಯೇ 10 ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೈಸೂರು ಜಿಲ್ಲೆಯಲ್ಲಿ 10, ಬಾಗಲಕೋಟೆ, ವಿಜಯಪುರ, ಬೆಂಗಳೂರು ನಗರ ಜಿಲ್ಲೆಯಲ್ಲಿ ತಲಾ 2, ಕಲಬುರಗಿ ಜಿಲ್ಲೆಯಲ್ಲಿ 1 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ.

ಈ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್‌ ಮಾಡಿದ್ದು, ಕರ್ನಾಟಕದಲ್ಲಿ ನಿನ್ನೆಯಿಂದ ಬುಧವಾರ ಮಧ್ಯಾಹ್ನದವರೆಗೆ 17 ಹೊಸ ಕೊರೊನಾ ವೈರಸ್‌ ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 277ಕ್ಕೆ ಏರಿದೆ. 75 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ನಾಗರೀಕರು ಮನೆಯಲ್ಲಿಯೇ ಸುರಕ್ಷಿತವಾಗಿ ಇರಬೇಕೆಂದು ಕಳಕಳಿಯ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

error: Content is protected !! Not allowed copy content from janadhvani.com