janadhvani

Kannada Online News Paper

ಭಾರತದಲ್ಲಿ ಹೆಚ್ಚುತ್ತಿರುವ ಇಸ್ಲಾಮೋಫೋಬಿಯಾ-ತಡೆಹಿಡಿಯಲು ಇಸ್ಲಾಮಿಕ್ ರಾಷ್ಟ್ರಗಳ ಒತ್ತಾಯ

ಜಿದ್ದಾ: ಕೋವಿಡ್ 19 ರ ಹಿನ್ನೆಲೆಯಲ್ಲಿ ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಉತ್ತೇಜಿಸುವ ಯೋಜಿತ ಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಸ್ಲಾಮಿಕ್ ರಾಷ್ಟ್ರಗಳು ಕೇಂದ್ರ ಸರಕಾರವನ್ನು ಕೋರಿವೆ. ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋ ಆಪರೇಷನ್‌ನ (ಒಐಸಿ) ಮಾನವ ಹಕ್ಕುಗಳ ಅಂಗವಾದ ಐಪಿಎಚ್‌ಆರ್‌ಸಿಯು ತನ್ನ ಪ್ರತಿಭಟನೆಯನ್ನು ಟ್ವಿಟರ್ ಮೂಲಕ ತಿಳಿಸಿದೆ.

ಕೋವಿಡ್ 19 ರ ಹಿನ್ನೆಲೆಯಲ್ಲಿ ಭಾರತದ ಮಾಧ್ಯಮಗಳು ಮುಸ್ಲಿಮರನ್ನು ಕೆಟ್ಟದಾಗಿ ಚಿತ್ರಿಸುತ್ತಿವೆ. ಅವರ ವಿರುದ್ಧ ತಾರತಮ್ಯ ಮತ್ತು ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ಮುಸ್ಲಿಂ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಸರಕಾರ ತಕ್ಷಣ ಮಧ್ಯಪ್ರವೇಶ ಮಾಡುವಂತೆ ಅದು ಕರೆ ನೀಡಿದೆ.

ಏತನ್ಮಧ್ಯೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೇಂದ್ರ ಸರಕಾರವನ್ನು ಟೀಕಿಸಲು ಮುಂದಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಭಾರತದಲ್ಲಿನ ತೀವ್ರ ಹಸಿವು ಮತ್ತು ಬಿಕ್ಕಟ್ಟಿನಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮೋದಿ ಸರಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಇದು ಜರ್ಮನಿಯ ಯಹೂದಿಗಳಿಗೆ ನಾಜಿಗಳು ಮಾಡುತ್ತಿರುವ ಉಪಾಯ. ಈ ಮೂಲಕ ಮೋದಿ ಸರಕಾರದ ಜನಾಂಗೀಯ ಹಿಂದುತ್ವ ಸಿದ್ಧಾಂತಕ್ಕೆ ಮತ್ತಷ್ಟು ಪುರಾವೆ ಲಭಿಸಿದಂತಾಗಿದೆ ಎಂದು ಇಮ್ರಾನ್ ಖಾನ್ ಹೇಳಿದರು.

error: Content is protected !! Not allowed copy content from janadhvani.com