ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಪಾಗೊನಾ ಗ್ರಾಮದ ಶಿವ ದೇಗುಲದಲ್ಲಿ ಇಬ್ಬರು ಸಾಧುಗಳ ಮೃತದೇಹ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ದೇಗುಲಕ್ಕೆ ತೆರಳಿದ ಜನರಿಗೆ ರಕ್ತಸಿಕ್ತವಾದ ಮೃತದೇಹಗಳು ಕಾಣಿಸಿವೆ. ತನಿಖೆ ಪ್ರಗತಿಯಲ್ಲಿದೆ. ಮರಣೋತ್ತರ ಪರೀಕ್ಷೆ ವರದಿ ಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ಜಗನ್‌ದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.ಈ ಇಬ್ಬರು ಹಳ್ಳಿಯಲ್ಲಿನ ಸ್ಥಳೀಯ ಶಿವ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ದೇವಸ್ಥಾನದ ಆವರಣದಲ್ಲಿ ತಾತ್ಕಾಲಿಕವಾಗಿ ವಾಸವಾಗಿದ್ದರು.
ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಇಬ್ಬರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಶಂಕಿಸಿ ಹೊಡೆದುಕೊಂದ ಘಟನೆ ಮಾಸುವ ಮೊದಲೇ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ದೇವಸ್ಥಾನದಲ್ಲಿ ಇಬ್ಬರು ಸಾಧುಗಳ ಬರ್ಬರ ಹತ್ಯೆ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅನೂಪ್‌ಶಹರ್ ಕೊಟ್ವಾಲಿ ವ್ಯಾಪ್ತಿಯಲ್ಲಿರುವ ಪಾಗೊನಾ ಹಳ್ಳಿಯೊಂದರಲ್ಲಿ ಮಂಗಳವಾರ ಬೆಳಗ್ಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಬಾಬಾಗಳು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು. ಮುರೈ ಅಲಿಯಾಸ್ ರಾಜು ಎಂಬಾತನು ಸಾಧು ಬಳಿ ಇದ್ದ ಇಕ್ಕುಳವನ್ನು ತೆಗೆದುಕೊಂಡು ಹೋಗಿದ್ದ. ಇದಕ್ಕಾಗಿ ಸಾಧುಗಳು ರಾಜುವಿಗೆ ಗದರಿಸಿ, ನಿಂದಿಸಿದ್ದರು. ಸಾಧುಗಳು ಕಳ್ಳತನ ಆರೋಪ ಮಾಡಿದ ಬಳಿಕ ರಾಜು ಕೆರಳಿದ್ದ. ಕಳೆದ ರಾತ್ರಿ ಗಾಂಜಾ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದ ರಾಜು ಹರಿತವಾದ ಆಯುಧದಿಂದ ಹತ್ಯೆಗೈದಿದ್ದಾನೆ. ಕೊಲೆಯ ಬಳಿಕ ಗ್ರಾಮಸ್ಥರು ರಾಜುವಿಗಾಗಿ ಹುಡುಕಾಟ ನಡೆಸಿದ್ದರು. ಕನಿಷ್ಠ ಬಟ್ಟೆ ಧರಿಸಿದ್ದ ರಾಜು ಮಾದಕದ್ರವ್ಯ ಸೇವಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸಿ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಲಂದ್‌ಶಹರ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಅವರು ಆದೇಶಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ