ರಿಯಾದ್: ಸೌದಿ ಅರೇಬಿಯಾದಿಂದ ಭಾರತಕ್ಕೆ ಮರಳಲು ಬಯಸುವವರ ಪಟ್ಟಿಯನ್ನು ರಾಯಭಾರ ಕಚೇರಿ ಸಿದ್ಧಪಡಿಸುತ್ತಿದೆ. ಕೇಂದ್ರ ಸರಕಾರವು ಸೌದಿಯಲ್ಲಿ ಸಿಲುಕಿರುವವರ ಒತ್ತಡಕ್ಕೆ ಮಣಿದು ಕ್ರಮವನ್ನು ತ್ವರಿತಗೊಳಿಸಿದೆ.
ಅನಿವಾಸಿಗಳ ಪೈಕಿ ದೇಶಕ್ಕೆ ಮರಳಲು ಬಯಸುವವರನ್ನು ಶೀಘ್ರದಲ್ಲೇ ಕರೆದೊಯ್ಯಲಾಗುವುದು ಎಂದು ವರದಿಗಳು ತಿಳಿಸಿವೆ. ಮುಂದಿನ ವಾರ, ಭಾರತೀಯರನ್ನು ಕೊಂಡೊಯ್ಯಲು ಪ್ರಾರಂಭಿಸಬಹುದು. ಈ ಕುರಿತು ಶೀಘ್ರದಲ್ಲೇ ಅಂತಿಮ ಪ್ರಕಟನೆ ನೀಡಲಾಗುವುದು.ಗರ್ಭಿಣಿ ಮತ್ತು ವೃದ್ಧರಿಗೆ ಆದ್ಯತೆ ನೀಡಲಾಗುತ್ತದೆ.
ಹೋಗಲು ಬಯಸುವವರ ಪಟ್ಟಿಯನ್ನು ಭಾರತೀಯ ರಾಯಭಾರ ಕಚೇರಿ ಸಿದ್ಧಪಡಿಸುತ್ತಿದ್ದು, ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ನೋಂದಣಿಯನ್ನು ಪೂರ್ಣಗೊಳಿಸಬಹುದು: https://t.co/K5Hbmr4cFP
ಹೋಗಲು ಬಯಸುವವರ ಪಟ್ಟಿಯನ್ನು ಸಿದ್ಧಪಡಿಸುವುದು ಗುರಿಯಾಗಿದ್ದು, ವಿಮಾನಯಾನ ಸಂಸ್ಥೆಗಳು ಮುಂದಿನ ವಾರ ತನ್ನ ವಿಮಾನಯಾನಗಳನ್ನು ಪ್ರಾರಂಭಿಸಲಿದೆ ಎನ್ನಲಾಗಿದೆ. ಈಗಾಗಲೇ ಸೌದಿ ಕಂಪನಿಗಳಲ್ಲಿ ನೋಂದಾಯಿಸಿಕೊಂಡವರಿಗೆ ಮುಂದಿನ ವಾರದಲ್ಲಿ ಪ್ರಯಾಣ ಪ್ರಾರಂಭವಾಗಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ