ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಶನಿವಾರ) ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಾಳೆ ಭಾಷಣ ಆರಂಭಿಸುವ ಮೊದಲು ಸಚಿವರ ಜೊತೆ ಸಮಗ್ರ ಚರ್ಚೆ ನಡೆಸಲಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಲಾಕ್ಡೌನ್ ಅವಧಿ ವಿಸ್ತರಿಸುವ ಕುರಿತು ಗೃಹ ಸಚುವ ಅಮಿತ್ ಷಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.ಒಂದು ವೇಳೆ ಲಾಕ್ಡೌನ್ ತೆರವುಗೊಳಿಸಿಬೇಕಾದರೆ, ಯಾವೆಲ್ಲ ತಯಾರಿ ನಡೆಸಿಕೊಳ್ಳಬೇಕು. ಲಾಕ್ಡೌನ್ ಎಗ್ಸಿಟ್ ಪ್ಲ್ಯಾನ್ ಹೇಗಿರಬೇಕು ಎಂಬ ಕುರಿತು ಸಮಗ್ರ ಚರ್ಚೆ ನಡೆಯಲಿದೆ.
ಕಳೆದ ಸೋಮವಾರ ಪ್ರಧಾನಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಲಾಕ್ಡೌನ್ ವಿಸ್ತರಣೆ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಮೇ. 15ರವೆರಗೆ ಲಾಕ್ಡೌನ್ ವಿಸ್ತರಿಸಬೇಕಾದ ಅಗತ್ಯತೆ ಇದೆ. ಆದರೆ, ವಲಯವಾರು ಲಾಕ್ಡೌನ್ಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದರು. ಬಹುತೇಕ ರಾಜ್ಯಗಳು ಲಾಕ್ಡೌನ್ ಅನ್ನು ಮತ್ತೊಂದು ಅವಧಿಗೆ ಮುಂದುವರಿಸಬೇಕು ಎಂಬ ಇಂಗಿತ ವ್ಯಕ್ತಪಡಿಸಿದ್ದರು.
ಇದೀಗ ಲಾಕ್ಡೌನ್ ಅವಧಿ ಮುಕ್ತಾಯವಾಗುತ್ತಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ದೇಶದಲ್ಲಿ ಲಾಕ್ಡೌನ್ ಮತ್ತೆ ವಿಸ್ತರಣೆಯಾಗುತ್ತಾ? ಇಲ್ಲವಾ? ಎಂಬ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ