ಬೆಂಗಳೂರು: ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರವು ಮೇ 4ನೇ ತಾರೀಕಿನಿಂದ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್ ತಾಲೂಕುಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಬಸ್ ಸಂಚಾರ ಆರಂಭಿಸಲು ಸಿಎಂ ಸಮ್ಮತಿ ನೀಡಿದ್ದಾರೆ ಎಂದರು.
ಸಂವಹನ ಕೊರತೆಯಿಂದಾಗಿ ಕೆಎಸ್ಆರ್ಟಿಸಿ ದುಪ್ಪಟ್ಟು ದರ ತೆಗೆದುಕೊಂಡಿದೆ. ಪ್ರಯಾಣಿಕರ ಜನರ ಹಿತದೃಷ್ಟಿಯಿಂದ ಈಗ ಒಂದೆಡೆ ದರ ಮಾತ್ರ ತೆಗೆದುಕೊಂಡು ಕಳಿಸುವಂತೆ ಆದೇಶಿಸಿದ್ದೇನೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.
ರಾಜ್ಯ ಸರ್ಕಾರ ಈಗಾಗಲೇ ಹಾಟ್ಸ್ಪಾಟ್ಗಳನ್ನು ಗುರುತಿಸಿದೆ. ಕೊರೋನಾ ವೈರಸ್ ಇರುವ ತಾಲೂಕುಗಳಲ್ಲಿ ಮುಂದಿನ ಆದೇಶ ನೀಡುವವರೆಗೂ ಬಸ್ ಸಂಚಾರ ಇರುವುದಿಲ್ಲ. ಉಳಿದಂತೆ ಮೇ 4ರಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಶುರುವಾಗಲಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ