ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಆರ್ ಆರ್ ವಿ ಪುರಂ ನ ಎಲ್ ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಸ್ಟೈರೀನ್ ಅನಿಲ ಸೋರಿಕೆಯಾದ ಕಾರಣ ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 1,000 ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಇಲ್ಲಿನ ಸುತ್ತ ಮತ್ತಲ ನಿವಾಸಿಗಳು ಅಲ್ಲಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದ ರಕ್ಷಣೆಗೋಸ್ಕರ ಸ್ಥಳೀಯರು ಮತ್ತು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಗೃಹ ಇಲಾಖೆಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು ಜನರ ಆರೋಗ್ಯ ಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ