janadhvani

Kannada Online News Paper

ದುಬೈ ನಿಂದ ಎರಡನೇ ವಿಮಾನ ಮಂಗಳೂರಿಗೆ ಆಗಮನ- ಜಿಲ್ಲಾಧಿಕಾರಿ ಹಾಜರ್

ಮಂಗಳೂರು:ಕೊರೋನಾ ಹರಡುವಿಕೆಯ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿರುವ ಅನಿವಾಸಿಗಳನ್ನು ಕರೆತರುವ ಪ್ರಕ್ರಿಯೆ ಚಾಲನೆಗೊಂಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈಯಿಂದ ಎರಡನೇ ವಿಮಾನವು ಇಂದು ರಾತ್ರಿ ಬಂದಿಳಿದಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 178 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ಸಂಜೆ 7.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ತಪಾಸಣೆ ನಡೆಸಿ, ಪ್ರಯಾಣಿಕರಿಗೆ ಸ್ಟ್ಯಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು. ಪ್ರಯಾಣಿಕರಿಗೆ ಊಟದ ವ್ಯವಸ್ಥೆಯನ್ನೂ ಏರ್ಪಡಿಸಲಾಗಿದೆ.

ಕಳೆದ ಬಾರಿಯ ಆಗಮನದಲ್ಲಿ ಅವ್ಯವಸ್ಥೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲವೂ ವ್ಯವಸ್ಥಿತವಾಗಿ ನಡೆಸಲಾಗಿದೆ.

ವಿಮಾನ ಆಗಮನ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.‌ ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಯಾಣಿಕರನ್ನು ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತ ಬಸ್ಸಿನಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದ್ದು, ವಿದೇಶದಿಂದ ಆಗಮಿಸಿದವರ ಗಂಟಲ ದ್ರವ ಪರೀಕ್ಷೆ ಮಂಗಳವಾರ ನಡೆಯಲಿದೆ.

error: Content is protected !! Not allowed copy content from janadhvani.com