janadhvani

Kannada Online News Paper

ಕ್ವಾರಂಟೈನ್ ಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 116 ಹೊಸ ಕೋವಿಡ್​​-19 ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಇದರ ಪರಿಣಾಮ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮುಂಬೈಯಿಂದ ಆಗಮಿಸಿದ್ದ ಧನಂಜಯ್ ಪೂಜಾರಿ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

error: Content is protected !! Not allowed copy content from janadhvani.com