ಬಂಟ್ವಾಳ ತಾಲೂಕು ಮುಸ್ಲಿಂ ಜಮಾತ್ ವತಿಯಿಂದ ನೂರಾರು ನಿರ್ಗತಿಕ ಕುಟುಂಬಗಳಿಗೆಈದ್ ಕಿಟ್ ವಿತರಿಸಲಾಯಿತು .ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಖಫ್ ಮಂಡಳಿ ಸದಸ್ಯ ಮೌಲಾನ ಶಾಫಿ ಸಅದಿ ಮುಖ್ಯ ಅತಿಥಿಯಾಗಿ ಬಾಗವಹಿಸಿ ಮಾತನಾಡಿದರು .
ಮುಂದಿನ ದಿನಗಳಲ್ಲಿ ತಾಲೂಕು ಮುಸ್ಲಿಂ ಸಮಿತಿಯು,ಸಮಾಜದ ಎಲ್ಲಾ ವರ್ಗದ ನಾಯಕರನ್ನು ಸೇರಿಸಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸಾಮಾಜಿಕ-ಆರ್ಥಿಕ ಧಾರ್ಮಿಕಅಭಿವೃದ್ಧಿಗೆ ಶ್ರಮಿಸಬೇಕು.ಸಮಾಜ ಮತ್ತು ಸಮುದಾಯದ ಒಗ್ಗಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿ,ಧಾರ್ಮಿಕ ಸೌಹಾರ್ದತೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದರು.
ತಾಲೂಕು ಮುಸ್ಲಿಂ ಜಮಾತ್ ಅಧ್ಯಕ್ಷ ತೌಫಿಕ್ ರಫೀಕ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಅನ್ವರ್ ಗೂಡಿನಬಳಿ,ಉಪಾಧ್ಯಕ್ಷರುಗಳಾದ ಬಶೀರ್ ಹಾಜಿ ಕುಂಬ್ರಮುತ್ತಲಿಬ್ ಹಾಜಿ ನಾರ್ಶ,ಇಸ್ಮೈಲ್ ಬಂಟ್ವಾಳ ರಶೀದ್ ಒಗ್ಗ,ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಉಸ್ಮಾನ್ ಹಾಜಿ ಅಬೂಬಕರ್ ಕಡೇಶಿವಾಲಯ ಮುಂತಾದವರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ