ನವದೆಹಲಿ: ದೆಹಲಿಯ ತುಘಲಕಾಬಾದ್ ಪ್ರದೇಶದ ಕೊಳೆಗೇರಿಗಳಲ್ಲಿ ಮಂಗಳವಾರ (ಮೇ 26) ಮುಂಜಾನೆ 1 ಗಂಟೆ ಸುಮಾರಿಗೆ ಭಾರೀ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 1,500 ಗುಡಿಸಲುಗಳು ಸುಟ್ಟುಹೋಗಿವೆ. ಬೆಂಕಿ ನಿಯಂತ್ರಿಸಲು ಕನಿಷ್ಠ 30 ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಆಗ್ನೇಯ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜೇಂದ್ರ ಪ್ರಸಾದ್ ಮೀನಾ ಎಎನ್‌ಐಗೆ ಮಾತನಾಡಿ “ತುಘಲಕಾಬಾದ್‌ನ ಕೊಳೆಗೇರಿಗಳಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಬೆಂಕಿಯ ಬಗ್ಗೆ ನಮಗೆ ಮಾಹಿತಿ ಬಂದಿದೆ. ಎಲ್ಲಾ ಪೊಲೀಸ್ ಸಿಬ್ಬಂದಿ ಕೂಡಲೇ ಇಲ್ಲಿಗೆ ತಲುಪಿದರು. ಸುಮಾರು 1,000-1,200 ಗುಡಿಸಲುಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದವು” ಎಂದು ಮಾಹಿತಿ ಒದಗಿಸಿದರು.
ಅಗ್ನಿಶಾಮಕ ಅಧಿಕಾರಿಯೊಬ್ಬರ ಪ್ರಕಾರ ಬೆಂಕಿಯ ಘಟನೆಗೆ ಸಂಬಂಧಿಸಿದಂತೆ ಇಲಾಖೆಗೆ ಬೆಳಿಗ್ಗೆ 12: 15 ರ ಸುಮಾರಿಗೆ ಕರೆ ಬಂದಿದೆ.
ದಕ್ಷಿಣ ದೆಹಲಿ ವಲಯದ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಸ್‌ಎಸ್ ತುಲಿ ಮಾತನಾಡಿ, ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಸುಮಾರು 30 ಅಗ್ನಿಶಾಮಕ ಟೆಂಡರ್‌ಗಳನ್ನು ಪ್ರದೇಶಕ್ಕೆ ರವಾನಿಸಲಾಗಿದೆ. ಬೆಂಕಿ ಈಗ ನಿಯಂತ್ರಣದಲ್ಲಿದೆ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಬೆಂಕಿಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಸುಮಾರು 30 ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣವನ್ನು ಇನ್ನೂ ಕಂಡುಹಿಡಿಯಬೇಕಾಗಿದೆ. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತುಲಿ ಹೇಳಿದ್ದಾರೆ.
ಕೊಳೆಗೇರಿ ನಿವಾಸಿಗಳು ಘಟನೆಯ ವೇಳೆ ನಿದ್ರೆಯಲ್ಲಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ಜನರನ್ನು ಎಬ್ಬಿಸಿ ಬೇರೆಡೆ ಸಾಗಿಸಲು ನೆರವಾದರು.
ಬೆಂಕಿಯನ್ನು ಬೆಳಗ್ಗೆ 3:40ಕ್ಕೆ ತಹಬಂದಿಗೆ ತರಲಾಗಿದ್ದು, ಆದರೆ, ಅಷ್ಟರೊಳಗೆ,ಸುಮಾರು 1,500 ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದವು. ಹೀಗಾಗಿ ಹಲವು ಜನರು ಮನೆ ಕಳೆದುಕೊಂಡಿದ್ದಾರೆ. ಸರಕಾರವು ಇದೀಗ ನಷ್ಟದ ಅಂದಾಜು ನಡೆಸುತ್ತಿದೆ.
ಬೆಂಕಿ ತಗಲಿದೆ ತಕ್ಷಣ ಹೆಚ್ಚಿನ ಜನರು ಗುಡಿಸಲಿನಿಂದ ಹೊರಬಂದಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಅಗ್ನಿಶಾಮಕದಳದ ಕಾರ್ಯಾಚರಣೆ ಮುಂದುವರಿದಿದ್ದು, ಈ ತನಕ ಸಾವು-ನೋವಿನ ವರದಿಯಾಗಿಲ್ಲ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ