ಕೊರೋನಾ ಎಂಬ ಮಾಹಾ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ ಮೆರೆದ ಯುವಕರು, ಪಾಣೆಮಂಗಳೂರಿನಲ್ಲಿ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ ಯುವಕರಾದ ಮುಹಮ್ಮದ್, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು.
ಈ ಸಂದರ್ಭದಲ್ಲಿ ಹಫೀಝನ ಪಾತ್ರವೂ ಮಹತ್ವಪೂರ್ಣವಾದದ್ದು ಮೊದಲು ನೇತ್ರಾವತಿ ವೀರರ ಮನೆ ಬಾಗಿಲಿಗೆ ತೆರಳಿ ವಿಷಯ ಮುಟ್ಟಿಸಿದ್ದಾನೆ. ಆ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ್ದು ಹಫೀಝ್ ಆಗಿದ್ದರು, ಈ ಹುಡುಗನಿಗೂ ತಮ್ಮೆಲ್ಲರ ಮೆಚ್ಚುಗೆಯೊಂದು ಇರಲಿ.ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಯು.ಎ.ಇ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.
ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಕೆಸಿಎಫ್ ಯು.ಎ.ಇ. ರಾಷ್ಟ್ರೀಯ ಅಧ್ಯಕ್ಷ ಜಲೀಲ್ ನಿಜಾಮಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ