ಮೈಸೂರು: ಜೂನ್ 25ರಿಂದ ಜುಲೈ 4ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ತಿಳಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಗುವುದು ಇದಕ್ಕೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮುಂದೆ ಬಂದಿದೆ ಎಂದರು.
ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹಾಯವಾಣಿ ಕೇಂದ್ರ ತೆರೆಯಲಾಗುವುದು. ಪ್ರತಿ ಬೆಂಚ್ಗಳ ನಡುವೆ ಸಾಮಾಜಿಕ ಅಂತರ ಇರಲಿದೆ. ಕಂಟೈನ್ಮೆಂಟ್ ಜೋನ್ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ, ಈಗ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ, ಜುಲೈನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅವರನ್ನು ಫ್ರೆಶ್ ಕ್ಯಾಂಡಿಡೇಟ್ ಎಂದೇ ಪರಿಗಣಿಸಲಾಗುವುದು ಎಂದು ಹೇಳಿದರು.
ಸದ್ಯಕ್ಕೆ ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಕಂಟೈನ್ಮೆಂಟ್ ಜೋನ್ ಇಲ್ಲ. ಚಂದನವಾಹಿನಿ ಮೂಲಕ ಪುನರ್ ಮನನ ತರಗತಿ. ಈ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜುಗೊಳಿಸಲಾಗಿದೆ. ಮಕ್ಕಳ ಸುರಕ್ಷತೆ ಹಾಗೂ ಮಕ್ಕಳು ಆತ್ಮ ವಿಶ್ವಾಸ ಈ ಎರಡು ಸೂತ್ರಗಳ ಮೂಲಕ ಪರೀಕ್ಷೆ ಬರೆಯುವಂತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಮುಂಬರುವ ಶೈಕ್ಷಣಿಕ ವರ್ಷವನ್ನು ಯಾವಾಗ ಆರಂಭಿಸಬೇಕು. ಪಠ್ಯ ಕ್ರಮ ಯಾವ ರೀತಿ ಇರಬೇಕು ಇದನ್ನ ಮುಂದಿನ ವಾರ ನಿರ್ಧಾರ ಮಾಡುತ್ತೇವೆ. 2020 ಕೊರೊನಾ ವರ್ಷವಾಗಿದ್ದು, ವಿಭಿನ್ನ ವರ್ಷವಾಗಿದೆ. ಪರಿಣಾಮ ಎಲ್ಲಾ ವರ್ಗಗಳು ಜರ್ಝರಿತವಾಗಿವೆ. ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಳ ಮಾಡಬಾರದು. ಮಾನವೀಯ ದೃಷ್ಟಿಯಿಂದ ನೋಡಬೇಕು. ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡಲು ಬಿಡುವುದಿಲ್ಲ. ಶಿಕ್ಷಣ ವ್ಯವಸ್ಥೆಯ ಮೇಲೆ ಕೊರೊನಾ ಭಾರೀ ಪರಿಣಾಮ ಬೀರಿದೆ ಎಂದಿದ್ದಾರೆ.
ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭವಾಗಿದ್ದು, ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಬರುವ ಸಾಧ್ಯತೆಯಿದೆ. ಜುಲೈ ಅಂತ್ಯಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಬರಲಿದೆ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನುಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ