ಬೆಂಗಳೂರು: ಲಾಕ್ಡೌನ್ನಿಂದಾಗಿ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಪೋಷಕರು ಮತ್ತು ಎಸ್ಡಿಎಂಸಿ ಸದಸ್ಯರು ಕೂಡಲೇ ತಮ್ಮ ಅಭಿಪ್ರಾಯವನ್ನು ತಿಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸೂಚಿಸಿದೆ.
ಇದೇ 10ರಿಂದ 12ರವರೆಗೆ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪ್ರೌಢಶಾಲೆಗಳನ್ನು ಪ್ರಾರಂಭಿಸುವ ಕುರಿತಂತೆ ಪೋಷಕರು ಮತ್ತು ಎಸ್ಡಿಎಂಸಿ ಸದಸ್ಯರ ಅಭಿಪ್ರಾಯವನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಪಡೆಯಬೇಕೆಂದು ಸೂಚನೆ ಕೊಡಲಾಗಿದೆ.
ಶಾಲೆಗಳನ್ನು ಪುನರಾರಂಭಿಸುವ ದಿನಾಂಕ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವಿಧಾನ, ಸುರಕ್ಷತಾ ಕ್ರಮ ಸೇರಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಸಲಹೆಗಳನ್ನು ಪೋಷಕರು ಮತ್ತು ಎಸ್ಡಿಎಂಸಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ತಿಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಇಲಾಖೆ ಮೇ 30ರಂದು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಬಗ್ಗೆ ಕೆಲವು ಸಲಹೆಗಳನ್ನು ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸುರೇಶ್ಕುಮಾರ್ ಅಧ್ಯಕ್ಷತೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಸಮಗ್ರ ಶಿಕ್ಷಣದ ಯೋಜನಾ ನಿರ್ದೇಶಕರು ಹಾಗೂ ಇತರ ಅಕಾರಿಗಳ ಸಭೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ “ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ” ಮಾಡುವ ಕುರಿತು ಈ ಕೆಳಕಂಡಂತೆ ಸೂಚಿಸಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ತರಬೇತಿ ಸಂಸ್ಥೆಗಳು. ಇತ್ಯಾದಿಗಳನ್ನು ತೆರೆಯಲಾಗುತ್ತದೆ. ರಾಜ್ಯ ಸರ್ಕಾರವು ಪೋಷಕರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಂಸ್ಥೆಯ ಮಟ್ಟದಲ್ಲಿ ಸಮಾಲೋಚನೆ ನಡೆಸಬಹುದು. ಅವರ ಪ್ರತಿಕ್ರಿಯೆಯ ಆಧಾರದ ಮೇಲೆ ಈ ಸಂಸ್ಥೆಗಳ ಪುನರಾರಂಭದ ಬಗ್ಗೆ ಜುಲೈನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.
ಹಾಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ (ಖಾಸಗಿ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕೂಡಲೇ ಜೂನ್ 10ರಿಂದ 12ರ ನಡುವಿನ ಅವಧಿಯಲ್ಲಿ ಪೋಷಕರು ಮತ್ತು ಎಸ್ಡಿಎಂಸಿ ಸದಸ್ಯರನ್ನು ಸಭೆಗೆ ಆಹ್ವಾನಿಸಿ ಅವರ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ