ಗೂಂಡಾಗಿರಿ: ಕಾಂಗ್ರೆಸ್​ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸೂಚನೆ

ಬೆಂಗಳೂರು: ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್​ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿದ ಸುದ್ದಿಯನ್ನು ಖಾಸಗೀ ಚಾನೆಲೊಂದು ಪ್ರಸಾರ ಮಾಡಿತ್ತು.

ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿ ಕ್ರಮ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.ಕೆ.ಆರ್​.ಪುರಂ ಶಾಸಕ ಭೈರತಿ ಬಸವರಾಜ್​ ಬೆಂಬಲಿಗ ನಾರಾಯಣಸ್ವಾಮಿ ಕಳೆದ ಶುಕ್ರವಾರ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಚೇರಿಯಲ್ಲಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದರು.

ಪಕ್ಷದಿಂದ ಉಚ್ಚಾಟನೆ:

ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್‌ ಸುರಿದು ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದ ಸಂಬಂಧ  ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮಂಗಳವಾರ ಆದೇಶಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!