ಹೊಸ ದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕಿತರಲ್ಲಿ ಕಂಡುಬರುವ ಅನಾರೋಗ್ಯದ ಲಕ್ಷಣಗಳು ಕಾಣಿಸಿವೆ.
ಹೀಗಾಗಿ, ಸ್ವಯಂ ಕ್ವಾರಂಟೈನ್ಗೆ ತೆರಳಲು ಕೇಜ್ರಿವಾಲ್ ನಿರ್ಧರಿಸಿದ್ದಾರೆ.ಅವರಿಗೆ ಮಂಗಳವಾರ ಕೋವಿಡ್-19 ತಪಾಸಣೆಗಳು ನಡೆಯಲಿವೆ.
ಕೇಜ್ರಿವಾಲ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಗಂಟಲಿನಲ್ಲಿ ಕೆರೆತವೂ ಉಂಟಾಗಿದೆ. ಮಧುಮೇಹ ರೋಗಿಯಾಗಿರುವ ಅವರನ್ನು ತಕ್ಷಣದಲ್ಲೇ ಕ್ವಾರಂಟೈನ್ಗೆ ತೆರಳಿ, ಪರೀಕ್ಷೆ ನಡೆಸಿಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾಗಿ ಅಧಿಕಾರಿಗಳು ಸೂಚಿಸಿದ್ದಾರೆ.
ಭಾನುವಾರ ಬೆಳಗ್ಗೆ ಕೇಜ್ರಿವಾಲ್ ಅವರು ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಆ ಬಳಿಕ ಯಾವುದೇ ಸಭೆ ನಡೆಸಿರಲಿಲ್ಲ. ಕಳೆದ ಎರಡು ತಿಂಗಳಿಂದ ತಮ್ಮ ಅಧಿಕೃತ ನಿವಾಸದಲ್ಲಿಯೇ ಉಳಿದುಕೊಂಡಿದ್ದ ಕೇಜ್ರಿವಾಲ್, ಅಲ್ಲಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ನಡೆಸುತ್ತಿದ್ದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ