ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ .ಕೊರೊನಾ ವೈರಸ್ ರೋಗ ಹೆಚ್ಚುತ್ತಿರುವುದರಿಂದ ಹಾಗೂ ಸರಕಾರ ಸೂಚಿಸಿರುವ ನಿಬಂಧನೆಗಳನ್ನು ಜಾರಿಗೊಳಿಸಲು ಕಷ್ಟವಾಗುವುದರಿಂದ, ಜೂ.30ರ ವರೆಗೆ ಎಲ್ಲಾ ಮಸೀದಿಗಳಲ್ಲಿ ಈಗಿನಂತೆ ಅಝಾನ್ ಹಾಗೂ ನಮಾಝನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಆದೇಶಿಸಲಾಗಿದೆ.
ಜೂನ್ 30ರ ವರೆಗೆ ಮಸೀದಿಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಬಾರದು ಎಂದು ದಿ ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಕೆ.ಎಸ್.ಮೊಹಮ್ಮದ್ ಮಸೂದ್ ಮನವಿ ಮಾಡಿದ್ದಾರೆ.
- ಮಸೀದಿಗಳಲ್ಲಿ ಸರಕಾರದ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
- ಮಸೀದಿಗೆ ನಮಾಝ್ ನಿರ್ವಹಿಸಲು ಬಂದವರು ತಮ್ಮ ಮನೆಯಲ್ಲಿಯೇ ವುಝು ಮಾಡಿಕೊಂಡು ಮುಸಲ್ಲ ತೆಗೆದುಕೊಂಡು ಬರಬೇಕು.
- ಮಸೀದಿಗೆ ಪ್ರವೇಶಿಸುವ ಮುನ್ನ ತಮ್ಮ ಕೈಗಳನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಬೇಕು.
- ಎಲ್ಲರೂ ಮಾಸ್ಕ್ ಉಪಯೋಗಿಸಬೇಕು.
- ಸರತಿ ಸಾಲಿನಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಆರು ಫೀಟ್ ಅಂತರ ಕಾಯ್ದುಕೊಳ್ಳಬೇಕು.
- ಥರ್ಮೋಮೀಟರ್ ಉಪಯೋಗಿಸಿ ನಮಾಝಿಗೆ ಬರುವ ಜನರ ಟೆಂಪರೇಚರನ್ನು ದೃಢಪಡಿಸಬೇಕು.
ಎಂಬ ನಿಯಮಗಳನ್ನು ಹೇರಲಾಗಿದೆ.
60 ವರ್ಷಕ್ಕಿಂತ ಮೇಲ್ಪಟ್ಟವರು, 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಹಾಗೂ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಸೀದಿಗೆ ಬರಬಾರದು. ನಮಾಜ್‌ಗೆ ಬರುವವರ ಹೆಸರು, ವಿಳಾಸ, ಮೊಬೈಲ್ ನಂಬರ್ ನೋಂದಾಯಿಸಲು ಒಂದು ರಿಜಿಸ್ಟ್ರಿ ಪುಸ್ತಕವನ್ನು ಇಡಬೇಕು ಎಂದು ಸೂಚಿಸಲಾಗಿದೆ.
ಮಸೀದಿ ಆವರಣದಲ್ಲಿ ಶೌಚಾಲಯಗಳನ್ನು ಬಳಕೆ ಮಾಡಬಾರದು. ಮಸೀದಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಜೂನ್ 30ರ ನಂತರ ಸರಕಾರದ ಆದೇಶವನ್ನು ನೋಡಿ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಮಸೂದ್ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್