ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಬಹಿರಂಗವಾಗಿ ಪಾಕಿಸ್ತಾನ್ ಝಿಂದಾಬಾದ್ ಕೂಗುವ ಮೂಲಕ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದ ಅಮೂಲ್ಯಾ ಲಿಯೋನಾ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಪೋಲೀಸರು ನಿಯಮದಂತೆ 90 ದಿನಗಳ ಒಳಗೆ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಬೇಕಿತ್ತು. ಆದರೆ, ಪೊಲೀಸರು ಅವಧಿ ಮೀರಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ದೇಶದ್ರೋಹ ಪ್ರಕರಣದಲ್ಲಿ ಅಮೂಲ್ಯಾ ಲಿಯೋನಾ ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ಹೀಗಾಗಿ ಕೆಲವು ದಾಖಲೆಗಳ ಪರಿಶೀಲನೆ ನಂತರ ಅಮೂಲ್ಯ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೂಲ್ಯ ಪರ ವಕೀಲರು ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ನಿನ್ನೆ ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ್ದ ಸಿವಿಲ್ ಮತ್ತು ಸೆಶನ್ಸ್ ಕೋರ್ಟ್, “ವಿದ್ಯಾರ್ಥಿಯಾಗಿರುವ 19 ವರ್ಷದ ಅಮೂಲ್ಯಾ ಬಿಡುಗಡೆಯಾದರೆ ತಲೆಮರೆಸಿಕೊಳ್ಳುವ ಸಾಧ್ಯತೆ. ಅಲ್ಲದೆ, ಇವರಿಗೆ ಜಾಮೀನು ನೀಡಿದರೆ, ಸಮಾಜದ ಶಾಂತಿ ಕದಡಬಲ್ಲ ಇಂತಹ ಅಪರಾಧಗಳಲ್ಲಿ ಮತ್ತೆ ಭಾಗಿಯಾಗುವ ಸಾಧ್ಯತೆ ಇದೆ” ಎಂದು ಅಭಿಪ್ರಾಯಪಟ್ಟಿತ್ತು. ಹೀಗಾಗಿ ಆಕೆಯ ಜಾಮೀನು ಅರ್ಜಿಯನ್ನು ರದ್ದು ಮಾಡಲಾಗಿತ್ತು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ