ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸುವಂತೆ ಅವರು ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹಠಕ್ಕೆ ಬಿದ್ದು ಎಸ್ಎಸ್ಎಲ್ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣ ಕಡಿಮೆ ಇದ್ದ ವೇಳೆ ಲಾಕ್ಡೌನ್ ಮಾಡಿದ್ರು. ಕೋವಿಡ್ 19 ಅಟ್ಟಹಾಸ ಮೆರೆಯುವ ವೇಳೆ ಓಪನ್ ಮಾಡಿದ್ದಾರೆ ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ ಭವಿಷ್ಯದ ಪ್ರಶ್ನೆ ಎದುರಾಗಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಪ್ರಾಥಮಿಕ ಹಂತದಿಂದ ಡಿಗ್ರಿಯವರೆಗೂ ಆನ್ಲೈನ್ ಶಿಕ್ಷಣ ಮಾಡೋದು ಬೇಡ ಎಂದು ಅವರು ಆನ್ಲೈನ್ ಶಿಕ್ಷಣಕ್ಕೆ ವಿರೋಧ ವ್ಯಕ್ತಪಡಿಸಿದರು.
ಸದ್ಯ ಕರ್ನಾಟಕವನ್ನು ಅಮೇರಿಕಾ ಮಾಡಲು ಆಗಲ್ಲ. ಕೊರೊನಾ ವೈರಸ್ ವೇಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿಲ್ಲ. ಹೀಗಾಗಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂದು ವಾಟಾಳ್ ನಾಗರಾಜ್ ಅವರು ನುಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ