janadhvani

Kannada Online News Paper

2020–21ನೇ ಸಾಲಿನಲ್ಲಿ ಬೋಧನಾ ಶುಲ್ಕ ಹೆಚ್ಚಿಸುವಂತಿಲ್ಲ- ಸರ್ಕಾರ ಸುತ್ತೋಲೆ

ಬೆಂಗಳೂರು: ಕೊರೊನಾದಿಂದ ತೀವ್ರ ಆರ್ಥಿಕ ಸಂಕಷ್ಟ ಉಂಟಾಗಿರುವ ಕಾರಣ 2020–21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಕಳೆದ ವರ್ಷಕ್ಕಿಂತ ಅಧಿಕ ಬೋಧನಾ ಶುಲ್ಕ ಪಡೆಯುವಂತಿಲ್ಲ ಎಂದು ಸೂಚಿಸಿ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.

‘ಕರ್ನಾಟಕ ಶಿಕ್ಷಣ ನಿಯಮ 1999ರಲ್ಲಿ ಕಲ್ಪಿಸಿರುವ ಅವಕಾಶವನ್ನು ಬಳಸಿಕೊಂಡು, ಕರ್ನಾಟಕ ಶಿಕ್ಷಣ ಕಾಯ್ದೆ–1983, ಸೆಕ್ಷನ್‌ 133, ಉಪನಿಯಮ 2ರಂತೆ ಎಲ್ಲಾ ಖಾಸಗಿ ಶಾಲೆಗಳು ಈ ವರ್ಷ ಬೋಧನಾ ಶುಲ್ಕ ಹೆಚ್ಚಿಸುವಂತಿಲ್ಲ. ಹೆಚ್ಚಿಸಿದ್ದೇ ಆದಲ್ಲಿ ಅಂತಹ ಶಾಲೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ–124 (ಎ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಲಾಗಿದೆ.

ಮಾರ್ಚ್‌ 24ರಿಂದ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಸಂಕಷ್ಟ ಉಂಟಾಗಿದೆ. ಹೀಗಾಗಿ ಶಾಲೆಗಳು ಶುಲ್ಕ ಹೆಚ್ಚಿಸದಂತೆ ಸೂಚಿಸಬೇಕು ಎಂದು ಸಾರ್ವಜನಿಕರು ಸರ್ಕಾರಕ್ಕೆ ಹಲವಾರು ಮನವಿ ಸಲ್ಲಿಸಿದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.

error: Content is protected !! Not allowed copy content from janadhvani.com