janadhvani

Kannada Online News Paper

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ- ಜುಲೈ 15ರ ವರೆಗೆ ವಿಸ್ತರಣೆ

ನವದೆಹಲಿ:ಕೋವಿಡ್ 19 ಹರಡುವಿಕೆಯ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ.ಕಾರ್ಗೋ ವಿಮಾನ ಸೇವೆಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದ್ದು, ವಿದೇಶದಲ್ಲಿ ಸಿಲುಕಿರುವ ಲಕ್ಷಾಂತರ ಭಾರತೀಯರು”ವಂದೇ ಭಾರತ್” ಹಾಗೂ ವಿವಿಧ ಸಂಘಟನೆಗಳ ಚಾರ್ಟರ್ಡ್ ವಿಮಾನಗಳನ್ನು ಅವಳಂಬಿಸಿ ದುಬಾರಿ ಹಣ ತೆತ್ತು ತಾಯಿನಾಡಿಗೆ ಮರಳುತ್ತಿದ್ದಾರೆ.

error: Content is protected !! Not allowed copy content from janadhvani.com