janadhvani

Kannada Online News Paper

ಪ್ರತಿ ಭಾನುವಾರ ಲಾಕ್‌ಡೌನ್- ಪ್ರತಿ ದಿನ ರಾತ್ರಿ 8 ರಿಂದ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಣ ಮಾಡಲು ರಾಜ್ಯ ಸರಕಾರ ಕೆಲವು ಕಠಿಣ ನಿರ್ಧಾರಗಳನ್ನು ಜಾರಿಗೆ ತರಲು ಮುಂದಾಗಿದೆ.

ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ನಿರ್ಧಾರಿಸಲಾಗಿದೆ.ಜುಲೈ 5ರಿಂದ ಭಾನುವಾರ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಸ್ಸು, ಟ್ಯಾಕ್ಸಿ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.

ಅಲ್ಲದೇ ಭಾನುವಾರದಿಂದ ಅಂದರೆ ಜೂನ್‌ 28ರಿಂದ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ. ಸರಕಾರಿ ನೌಕರರಿಗೆ ವಾರಕ್ಕೆ ಐದು ದಿನಗಳ ಕಾಲ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.

ಈ ಸಮಯದಲ್ಲಿ ಸಂಪೂರ್ಣ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ರಾತ್ರಿಹೊತ್ತಿನ ಅನಗತ್ಯ ಸಂಚಾರಕ್ಕೆ ಕಡಿವಾಣ ಹೇರುವ ಮೂಲಕ ಕೊರೊನಾ ಹರಡುವಿಕೆ ತಡೆಗೆ ತಜ್ಞರ ಸಮಿತಿಗೆ ಶಿಫಾರಸು ಮಾಡಲಾಗಿತ್ತು.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ತಜ್ಞರ ಕಾರ್ಯಪಡೆ ಜತೆ ಸಭೆ ನಡೆಸಿತ್ತು.

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಬೇಕೆಂಬ ಒತ್ತಡ ರಾಜ್ಯ ಸರಕಾರದ ಮೇಲಿದೆ. ಈ ನಿಟ್ಟಿನಲ್ಲಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ

error: Content is protected !! Not allowed copy content from janadhvani.com