janadhvani

Kannada Online News Paper

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರವು ಆರೆಂಜ್ ಅಲರ್ಟ್ ಘೋಷಿಸಿದೆ.

ಮುನ್ಸೂಚನೆಯ ಪ್ರಕಾರ ಜಿಲ್ಲೆಗೆ 100 ಮಿ.ಮೀ ನಿಂದ 115 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ. ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸೂಚನೆ ನೀಡಿದೆ.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳಿಗೆ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ತಿಳಿಸಲಾಗಿದೆ.

ನದಿಗಳು ಅಥವಾ ಸಮುದ್ರಕ್ಕೆ ಹೋಗದಂತೆ ನಾಗರಿಕರು ಕಾಳಜಿ ವಹಿಸಬೇಕು. ಅಪಾಯಕಾರಿ ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಎಂದು ತಿಳಿಸಲಾಗಿದೆ.

error: Content is protected !! Not allowed copy content from janadhvani.com