janadhvani

Kannada Online News Paper

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದಲ್ಲಿ ಪೊಲೀಸ್ ರೈಡ್- ಮಾಲ್,ಹೋಟೆಲ್ ಗಳಿಗೆ ವಾರ್ನಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ವೈರಸ್​ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವಿಟರ್​ನಲ್ಲಿ ಖಡಕ್ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್​ ಖಾತೆ ಬರೆದುಕೊಂಡಿರುವ ಅವರು, ನಗರದ ಹೋಟೆಲ್, ಮಾಲ್, ಶಾಪ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ಎಲ್ಲಾ ಮಾಲ್ ಹಾಗೂ ಶಾಪ್​ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ‌ ಅಂತರ ಕಾಪಾಡಬೇಕು ಎಂದಿದ್ದಾರೆ.

ಇನ್ನು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ ಅಂದ್ರೆ ಪೊಲೀಸರು ಶಾಪ್​ಗಳ ಮೇಲೆ ರೈಡ್ ಮಾಡಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲುತ್ತೇವೆ. ಅಂಗಡಿ ಹಾಗೂ ಮಾಲ್​ಗಳ ಮೇಲೆ ಪೊಲೀಸರು ಈಗಾಗಲೇ ರೇಡ್ ಮಾಡುತ್ತಿದ್ದಾರೆ. ಸಾಕಷ್ಟು ಕಡೆ ಅಂಗಡಿ ಮಾಲೀಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆ ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

error: Content is protected !! Not allowed copy content from janadhvani.com