ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ಕ್ಯೂ ಟೀಂ ವತಿಯಿಂದ ಸುಳ್ಯ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದ ಪರಿಸರವನ್ನು ಜೂನ್27 ರಂದು ಸ್ವಚ್ಛಗೊಳಿಸಲಾಯಿತು.

ಬೆಳಗ್ಗೆ 9 ಗಂಟೆಗೆ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಕರುಣಾಕರ ಕೆ.ವಿ ರವರು ಎಸ್.ವೈ.ಎಸ್ ಹಾಗೂ ಎಸ್.ಎಸ್.ಎಫ್ ಇದರ ಕಾರ್ಯವೈಖರಿಯನ್ನು ಅಭಿನಂದಿಸಿದರು.

ತಾಲೂಕು ಆಸ್ಪತ್ರೆಯ ಶವಾಗಾರದ ಪರಿಸರದಲ್ಲಿ ಶೇಖರಣೆಗೊಂಡಿದ್ದ ಕಸ ತ್ಯಾಜ್ಯಗಳನ್ನು ಜೆಸಿಬಿ ಯಂತ್ರದ ಮೂಲಕ ತೆಗೆಸಿ ಶುಚಿಗೊಳಿಸಲಾಯಿತು. ಆಸ್ಪತ್ರೆಯ ಮುಂಭಾಗದ ಮೂಲಕ ಶವಾಗಾರಕ್ಕೆ ತೆರಳುವ ದಾರಿ ಮತ್ತು ಆಸ್ಪತ್ರೆಯ ಸುತ್ತಮುತ್ತಲೂ ಬೆಳೆದಿದ್ದ ಕಾಡು ಕೊಳೆಗಳನ್ನು ಕಟಾವು ಯಂತ್ರದ ಮೂಲಕ ತೆರವುಗೊಳಿಸಿ ಶುಚೀಕರಣ ನಡೆಸಲಾಯಿತು.

ಎಸ್. ಎಸ್. ಎಫ್ ಸುಳ್ಯ ಡಿವಿಷನ್ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ, ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ, ಎಸ್.ವೈ.ಎಸ್ ನಾಯಕರುಗಳಾದ ಹಸೈನಾರ್ ಗುತ್ತಿಗಾರು, ಸಂಶುದ್ದೀನ್ ಪಳ್ಳಿಮಜಲು ಮುಂತಾದವರ ನೇತೃತ್ವದಲ್ಲಿ ಸುಮಾರು ಮೂವತ್ತರಷ್ಟು ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿಕಾರ್ಯಕರ್ತರನ್ನು ಸುಳ್ಯ ನಗರ ಪಂಚಾಯತ್ ಸದಸ್ಯ ಉಮರ್ ಕೆ.ಎಸ್. ರವರು ಪಾಲ್ಗೊಂಡು ಮಾರ್ಗದರ್ಶನಗಳನ್ನು ನೀಡಿ ಕಾರ್ಯಕರ್ತರೊಂದಿಗೆ ಸಹಕರಿಸಿದರು. ಎಸ್‌ಎಸ್‌ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹುದ್ದೀನ್ ಹಿಮಮಿ, ಕೆಸಿಎಫ್ ಅಬುಧಾಬಿ ಪಬ್ಲೀಕೇಶನ್ ಕನ್ವಿನರ್ ಕಬೀರ್ ಜಟ್ಟಿಪಳ್ಳ ಸ್ವಚತೆ ಬಗ್ಗೆ ಮಾಹಿತಿ ನೀಡಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ