ನವದೆಹಲಿ:ಕೇಂದ್ರಾಡಳಿತವು ಜನ ಸಾಮಾನ್ಯರ ಜೇಬಿಗೆ ಹೊರೆ ಹೆಚ್ಚಿಸುವ ಚಾಳಿಯನ್ನು ಮುಂದುವರಿಸಿದ್ದು, ಪೆಟ್ರೋಲ್,ಡೀಸೆಲ್ ಬೆಲೆಯೇರಿಕೆಯೊಂದಿಗೆ ಇಂದಿನಿಂದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ.
ಜುಲೈ ತಿಂಗಳಲ್ಲಿ ನಿಮ್ಮ ಜೇಬಿನ ಹೊರೆ ಹೆಚ್ಚಾಗುವ ಹಲವು ಬದಲಾವಣೆಗಳು ಸಂಭವಿಸುತ್ತಿವೆ. ಆದರೆ ಈ ಬದಲಾವಣೆಗಳ ಮಧ್ಯೆ ಅಡಿಗೆ ವೆಚ್ಚವೇ ದೊಡ್ಡ ಹೊರೆಯಾದಂತೆ ಕಾಣುತ್ತಿದೆ. ತಿಂಗಳ ಮೊದಲ ದಿನ, ಸಾಮಾನ್ಯ ಜನರ ಜೇಬಿನ ಮೇಲೆ ಹೊರೆ ಹೆಚ್ಚಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು (ಎಚ್‌ಪಿಸಿಎಲ್, ಬಿಪಿಸಿಎಲ್, ಐಒಸಿ) ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 1 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದರ 594 ರೂ. ಗಳಿಗೆ ಏರಿದೆ.
ಕಳೆದ 22 ದಿನಗಳಿಂದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಹೆಚ್ಚಿಸುತ್ತಿದ್ದವು. ಆದರೆ ಹಣದುಬ್ಬರದ ಎಫೆಕ್ಟ್ ಅಡಿಗೆಮನೆಯನ್ನು ತಲುಪುವುದು ಇದೇ ಮೊದಲು. ನಮ್ಮ ಪಾಲುದಾರ ವೆಬ್ಸೈಟ್ ಝೀಬಿಜ್ ಡಾಟ್ ಕಾಮ್ ಪ್ರಕಾರ, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸಹ ಇಂದಿನಿಂದ ಹೆಚ್ಚಿಸಲಾಗಿದೆ. ಎಲ್‌ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ 4 ರೂಪಾಯಿ, ಮುಂಬೈನಲ್ಲಿ 3.50 ರೂಪಾಯಿ ಮತ್ತು ಚೆನ್ನೈನಲ್ಲಿ 4 ರೂಪಾಯಿ ದುಬಾರಿಯಾಗಿದೆ. ಆದರೆ, 19 ಕೆಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.
ಜೂನ್‌ನಲ್ಲೂ ಏರಿಕೆ ಕಂಡಿದ್ದ ಎಲ್‌ಪಿಜಿ ಸಿಲಿಂಡರ್ ಬೆಲೆ:
ಜೂನ್‌ನಲ್ಲಿ ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 11.50 ರೂ.ಗೆ ಹೆಚ್ಚಿಸಲಾಗಿದೆ. ಅದೇ ಸಮಯದಲ್ಲಿ ಇದು ಮೇ ತಿಂಗಳಲ್ಲಿ 162.50 ರೂ.ವರೆಗೆ ಅಗ್ಗವಾಗಿತ್ತು.
ಹೊಸ ದರಗಳು ?
ಐಒಸಿ ವೆಬ್‌ಸೈಟ್‌ನಲ್ಲಿ ನೀಡಿರುವ ಬೆಲೆಯ ಪ್ರಕಾರ ದೆಹಲಿಯಲ್ಲಿ ಸಿಲಿಂಡರ್ ಬೆಲೆ 1 ರೂಪಾಯಿ ಹೆಚ್ಚಾಗಿದೆ. ಈಗ ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 593 ರೂ.ನಿಂದ 594 ರೂ.ಗೆ ಏರಿದೆ.
ಕೋಲ್ಕತ್ತಾ 14.2 ಕೆಜಿ ಸಿಲಿಂಡರ್ ದರ 616 ರೂ.ಗಳಿಂದ 620.50 ರೂ.ಗೆ ಏರಿದೆ. ಮುಂಬೈ 590 ರೂ.ನಿಂದ 594 ರೂ.ಗೆ ಮತ್ತು ಚೆನ್ನೈನಲ್ಲಿ 606.50 ರೂ.ಗಳಿಂದ 610.50 ರೂ.ಗೆ ಏರಿದೆ. 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯ 1139.50 ರೂ.ನಿಂದ 1135 ರೂ.ಗೆ ಇಳಿದಿದೆ. ಅದೇ ಸಮಯದಲ್ಲಿ ಮುಂಬೈನಲ್ಲಿ 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1197.50 ರೂ.ನಿಂದ 1193 ರೂ.ಗೆ ಇಳಿದಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ