ಬೆಂಗಳೂರು: ಮಾರಕ ಕೊರೊನಾ ವೈರಸ್ ಪಿಡುಗಿಗೆ ಡಾ. ಗಿರಿಧರ್ ಕಜೆಯವರು ಕಂಡು ಹಿಡಿದಿರುವ ಔಷಧ ಪ್ರಯೋಗ ಯಶಸ್ವಿಯನ್ನು ಕಂಡಿದೆ. ಆಯುರ್ವೇದದ ಮೂಲಕ ಕೊರೊನಾ ಸೋಂಕಿತರನ್ನು ಗುಣಪಡಿಸಿದ ಡಾ.ಗಿರಿಧರ ಕಜೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ 23 ವರ್ಷದಿಂದ 65 ವರ್ಷದವರೆಗಿನ ಕೊರೊನಾ ಸೋಂಕಿತರಿಗೆ ಈ ಆಯುರ್ವೇದ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಪಡೆದ ಸೋಂಕಿತರು ಗುಣಮುಖರಾಗಿದ್ದಾರೆ.
ಹೃದ್ರೋಗ, ಕ್ಷಯ ರೋಗ, ಮಧುಮೇಹ ಇದ್ದ ರೋಗಿಗಳು ಈ ಆಯುರ್ವೇದ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಅತಿ ಕಡಿಮೆ ವೆಚ್ಚದ ಚಿಕಿತ್ಸೆ ಇದಾಗಿದ್ದು, ಡಾ. ಗಿರಿಧರ್ ಕಜೆಯವರ ಈ ಪ್ರಯೋಗ ಯಶಸ್ವಿಯನ್ನು ಕಂಡಿದೆ. ಬೇರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವವರು ಸೇರಿ 10 ಜನ ಸೋಂಕಿತರು ಆಯುರ್ವೇದ ಮಾತ್ರೆಗಳನ್ನು ಸೇವಿಸಿ ಗುಣಮುಖರಾಗಿದ್ದಾರೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಟ್ರಯಲ್ಸ್ ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಅಧೀನ ಸಂಸ್ಥೆಯಾದ ಕ್ಲಿನಿಕಲಿ ಟ್ರಯಲ್ ರಿಜಿಸ್ಟರಿ ಆಫ್ ಇಂಡಿಯಾ ಅನುಮತಿ ನೀಡಿತ್ತು. ಜೂ.7 ರಿಂದ 25ರವರೆಗೂ ಈ ಪ್ರಯೋಗ ನಡೆದಿತ್ತು.
ಆಯುರ್ವೇದದ ಈ ಔಷಧಿಗೆ 90ರೂ. ನಿಂದ 180 ರೂ. ತಗುಲುತ್ತದೆ. ಇನ್ನು ಮುಂದಿನ ಹಂತದಲ್ಲಿ ಹೆಚ್ಚಿನ ಸೋಂಕಿತರಿಗೆ ಮತ್ತು ಮುಂಜಾಗ್ರತಾ ದೃಷ್ಟಿಯಿಂದ ಸೋಂಕಿತ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಈ ಔಷಧ ನೀಡಬಹುದು. ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಡಾ.ಗಿರಿಧರ ಕಜೆ ತಿಳಿಸಿದ್ದಾರೆ.
ಈ ಆಯುರ್ವೇದ ಚಿಕಿತ್ಸೆ ವಿಧಾನವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿಗೆ ವರದಿ ನೀಡಲು ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು