janadhvani

Kannada Online News Paper

ಮಂಗಳೂರು: ಕೊರೊನಾ ರೋಗ ಲಕ್ಷಣ ಇಲ್ಲದವವರಿಗೆ ಹೋಮ್ ಐಸೋಲೇಷನ್ ಮಾಡಲು ಸರ್ಕಾರ ನಿರ್ಧರಿಸಿದ್ದು, ದಕ ಜಿಲ್ಲೆಯಲ್ಲಿ ಜಾರಿಗೆ ತರಲು ವ್ಯವಸ್ಥೆಗೊಳಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ Positive ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಮೌಖಿಕ ಆದೇಶದಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತವಾದ(Asymptomatic) ರೋಗಿಗಳನ್ನು ತಮ್ಮ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಅವರನ್ನು ಆರೈಕೆಗೆ ವ್ಯವಸ್ಥೆ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು. ಸಂಬಂಧಿಸಿದ ಮಾರ್ಗಸೂಚಿಯನ್ನು ಇದರೊಂದಿಗೆ ಲಗತ್ರಿಕರಿಸಲಾಗಿದ್ದು ನಿರ್ಬಂಧನೆಗಳನ್ನು ಪಾಲಿಸಿಕೊಂಡು ಬರಬೇಕೆನ್ನುವ ಷರತ್ತಿನೊಂದಿಗೆ ಆದೇಶವನ್ನು ಹೊರಡಿಸಲಾಗಿದೆ.

error: Content is protected !! Not allowed copy content from janadhvani.com