ಗುರುಪುರ-ಕೈಕಂಬ ಬಂಗ್ಳಗುಡ್ಡೆ ಎಂಬಲ್ಲಿ ಗುಡ್ಡ ಜರಿದು ಉಂಟಾದ ಅಪಘಾತದಲ್ಲಿ ಇಬ್ಬರು ಮಕ್ಕಳು ಮಡಿದು ಹಲವರಿಗೆ ಗಾಯವಾಗಿ ಅನೇಕ ಮಂದಿಗೆ ಲಕ್ಷಾಂತರ ರೂಪಾಯಿಗಳ ನಾಶ ನಷ್ಟ ಉಂಟಾದ ಘಟನೆಗೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ತೀವ್ರ ಸಂತಾಪ ಮತ್ತು ಆಘಾತ ವ್ಯಕ್ತಪಡಿಸಿದೆ.
ದುರಂತ ಸ್ಥಳದಲ್ಲಿ ಅಧಿಕಾರಿಗಳು, ಇಸಾಬಾ ತಂಡದ ಸಮೇತ ಇತರ ಸ್ವಯಂಸೇವಕರು ಮತ್ತು ಸ್ಥಳೀಯರು ನಡೆಸಿದ ಸಕ್ರಿಯ ಕಾರ್ಯಾಚರಣೆಗಳನ್ನು ಸಂಘಟನೆ ಶ್ಲಾಘಿಸಿದೆ.
ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು, ಸಂತ್ರಸ್ತರ ಪುನರ್ವಸತಿಗೆ ಅಗತ್ಯವಾದ ತುರ್ತು ಕೆಲಸಗಳನ್ನು ಜನಪ್ರತಿನಿಧಿಗಳು ಶೀಘ್ರವಾಗಿ ಕೈಗೊಳ್ಳ ಬೇಕೆಂದೂ ಸಂಘಟನೆ ಮನವಿ ಮಾಡಿದೆ.
ಮೃತರ ಪೋಷಕರ ಮನಃ ಶಾಂತಿಗಾಗಿ ಎಲ್ಲರೂ ವಿಶೇಷ ಪ್ರಾರ್ಥನೆ ಮಾಡಬೇಕು ಮತ್ತು ಸಂತ್ರಸ್ತರಿಗೆ ಅಗತ್ಯವಾದ ನೆರವು ನೀಡಲು ಎಲ್ಲರೂ ಮುಂದೆ ಬರಬೇಕೆಂದು ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಉಸ್ಮಾನ್ ಸ’ಅದಿ ಪಟ್ಟೋರಿ, ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಅಪೇಕ್ಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ