janadhvani

Kannada Online News Paper

ಕೊರೋನಾ ಪಾಸಿಟಿವ್ ಇದ್ದ ಯುವಕ ವೆನ್ ಲಾಕ್ ಆಸ್ಪತ್ರೆಯಿಂದ ಪರಾರಿ

ಮಂಗಳೂರು: ಕೋವಿಡ್ ಪಾಸಿಟಿವ್ ಇರುವ ಯುವಕ ಆಸ್ಪತ್ರೆಯಿಂದ ಪರಾರಿ
ಮಂಗಳೂರು: ಕೊರೋನಾ ಪಾಸಿಟಿವ್ ಇದ್ದ ಯುವಕನೋರ್ವ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಿಂದ ರವಿವಾರ ತಪ್ಪಿಸಿಕೊಂಡಿರುವುದು ವರದಿಯಾಗಿದೆ.ತಪ್ಪಿಸಿಕೊಂಡ ಯುವಕನನ್ನು ಪುತ್ತೂರು ದರ್ಬೆ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯ ಇದ್ದ ದೇವರಾಜ್ ಎಂದು ಗುರುತಿಸಲಾಗಿದೆ.

ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈತನ ಪತ್ತೆಯಾದರೆ ಪಾಂಡೇಶ್ವರ ಪೊಲೀಸ್ ಠಾಣೆಗೆ (ಫೋನ್: 0824-2220518) ಅಥವಾ ಪೊಲೀಸ್ ಕಂಟ್ರೋಲ್ ರೂಂ (ನಂ. 100/ 0824-2220800) ಗೆ ಮಾಹಿತಿ ನೀಡಲು ಕೋರಲಾಗಿದೆ.

error: Content is protected !! Not allowed copy content from janadhvani.com