ಬೆಂಗಳೂರು: ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿದ್ದು, ಹೊರ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿ, ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿದೆ.
ಈ ಮುಂಚೆ ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಒಂದು ಸರ್ಕಾರಿ ಅಥವಾ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿತ್ತು. ಇದೀಗ ಹೊರ ರಾಜ್ಯದಿಂದ ಆಗಮಿಸುವವರಿಗೆ ಅದನ್ನು ರದ್ದುಗೊಳಿಸಿದ್ದು, ಮನೆಯಲ್ಲೇ 14 ದಿನ ಕ್ವಾರಂಟೈನ್ಗೆ ಒಳಗಾದರೆ ಸಾಕು ಎಂದು ರಾಜ್ಯ ಸರ್ಕಾರ ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ವಿದೇಶದಿಂದ ಆಗಮಿಸುವವರಿಗೂ ಇದೇ ನಿಯಮವೆಂದು ಪ್ರಮುಖ ದೈನಿಕವೊಂದು ವರದಿ ಮಾಡಿದ್ದು, ಪೂರ್ಣ ಮಾಹಿತಿ ಲಭ್ಯವಾಗಿಲ್ಲ.
ಈ ಹಿಂದೆ ರಾಜ್ಯ ಸರ್ಕಾರ ಹೊರ ರಾಜ್ಯ ಅಥವಾ ವಿದೇಶದಿಂದ ಆಗಮಿಸುವವರು ಖಡ್ಡಾಯವಾಗಿ 07 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 07 ದಿನ ಹೋಮ್ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ನಿಯಮ ರೂಪಿಸಿತ್ತು. ಅಲ್ಲದೆ, ಕ್ವಾರಂಟೈನ್ಗೆ ಒಳಗಾಗುವವರೇ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ನಿಯಮದಿಂದಾಗಿ ಅನೇಕರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಯೂ ಉಂಟಾಗಿತ್ತು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ