janadhvani

Kannada Online News Paper

ಶಾಲಾ ಕಾಲೇಜುಗಳ ಪ್ರಾರಂಭದ ಬಗ್ಗೆ ನಿರ್ಧಾರ ಕೈಗೊಂಡಿಲ್ಲ- ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಹರಡಿರುವ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರವಾಗಲಿ ಅಥವಾ ಶಿಕ್ಷಣ ಇಲಾಖೆಯಾಗಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.

ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸರ್ಕಾರ ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ.

ತರಗತಿ ಆರಂಭದ ಬಗ್ಗೆ ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಯಾವುದೇ ಆತಂಕಪಡಬಾರದು. ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಗಳನ್ನು ನಿಜವೆಂದು ನಂಬಬೇಡಿ. ಸರ್ಕಾರ ತನ್ನ ನಿರ್ಣಯವನ್ನು ಅಧಿಕೃತವಾಗಿ ಪ್ರಕಟಿಸುವ ಮುನ್ನ ಅಂತೆಕಂತೆ ಸುದ್ದಿಗಳಿಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ಸುರೇಶ್‍ಕುಮಾರ್ ಹೇಳಿದ್ದಾರೆ

error: Content is protected !! Not allowed copy content from janadhvani.com