janadhvani

Kannada Online News Paper

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿಷೇಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ಹೊರಡಿಸಿದ್ದಾರೆ.

ಕಳೆದ ಮಳೆಗಾಲದಲ್ಲಿ ಘಾಟಿ ರಸ್ತೆಯಲ್ಲಿ ಸಂಪೂರ್ಣವಾಗಿ ಮಾರ್ಗ ಮಣ್ಣು ಬಿದ್ದು ಮುಚ್ಚಿದ್ದು ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿತ್ತು ಇದೀಗ ಎಡೆಬಿಡದೆ ಮಳೆ ಸುರಿಯುತ್ತಿದ್ದು ಮುಂಜಾಗರೂಕತಾ ಕ್ರಮವಾಗಿ ಈ ಆದೇಶವನ್ನು ಹೊರಡಿಸಲಾಗಿದೆ.

error: Content is protected !! Not allowed copy content from janadhvani.com