janadhvani

Kannada Online News Paper

ಜುಲೈ 14 ರಿಂದ ಬೆಂಗಳೂರು 1 ವಾರ ಸಂಪೂರ್ಣ ಬಂದ್…!!!

ಬೆಂಗಳೂರು: ಅನಿಯಂತ್ರಿತವಾಗಿ ಮೇಲೇರುತ್ತಿರುವ ಕೊರೋನಾ ಪಾಸಿಟಿವ್ ಕೇಸುಗಳಿಂದ ತಲ್ಲಣಿಸುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಸಂಪೂರ್ಣವಾಗಿ 1 ವಾರಗಳ ಕಾಲ ಲಾಕ್ ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ “ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು.” ಎಂದು ಬರೆದಿದ್ದಾರೆ.
ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿರುವ ಯಡಿಯೂರಪ್ಪ, ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ವಿನಂತಿಸಿದ್ದಾರೆ.

error: Content is protected !! Not allowed copy content from janadhvani.com