ಮಂಗಳೂರು (ಜನಧ್ವನಿ ವಾರ್ತೆ) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರು ಒಂಬತ್ತು ಮಂದಿ ಮೃತರಾಗಿದ್ದರೆ.50 ರಿಂದ 60 ವರ್ಷದೊಳಗಿನ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 60 ರಿಂದ 70 ವರ್ಷದೊಳಗೆ 11 ಮಂದಿ ಮೃತಪಟ್ಟಿದ್ದಾರೆ. 70ಕ್ಕಿಂತ ವರ್ಷಕ್ಕಿಂತ ಮೇಲ್ಪಟ್ಟ ಒಬ್ಬರು ಸಾವನ್ನಪ್ಪಿದ್ದಾರೆ. ಸಾವಿಗೀಡಾದ 36 ಜನರ ಪೈಕಿ 26 ಜನರ ಇತರ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪಿದ್ದಾರೆ. 4 ಜನರು ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ. 4 ಜನರು ಮಾತ್ರ ಕೋವಿಡ್ ನ್ಯುಮೋನಿಯಾದಿಂದ ಸಾವನ್ನಪ್ಪಿದ್ದಾರೆ. ಒಬ್ಬರು ಕೋವಿಡ್ ಅಲ್ಲದೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ ನೀಡಿದ್ದಾರೆ.
ಸಾವಿನ ನಿಖರ ಕಾರಣವನ್ನು ನಿರ್ಧರಿಸಲು ತಜ್ಞರ ಸಮಿತಿಯನ್ನು ರಚಿಸಿದ್ದು 13 ಮಂದಿ ವೈದ್ಯಾಧಿಕಾರಿಗಳ ತಂಡ ತನಿಖೆ ನಡೆಸಲಿದೆ.







funny DC