janadhvani

Kannada Online News Paper

ಕೋರೋಣ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ನಡೆಸುತ್ತಿರುವ ದಂಧೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು

ಉಪ್ಪಿನಂಗಡಿ : ಕೋರೋಣ ವೈರಸ್ ನೆಪದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ತಿಳಿಸಿದ್ದಾರೆ.

ಬಡವರ ಬಳಿ ಹಣ ವಿಲ್ಲದೇ ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಆದಷ್ಟು ಬೇಗ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳು ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕು ಅದು ಬಿಟ್ಟು ಜನರಿಂದ ಹಣ ವಸೂಲಿ ದಂಧೆ ಮಾಡಬಾರದು ಹಾಗೂ ಸರ್ಕಾರ ಇದಕ್ಕೆ ಕಡಿವಾಣ ಆದಷ್ಟು ಬೇಗಹಾಕಬೇಕು ಇಲ್ಲವೆಂದಾದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಬಂದೊದಗೀತು ಎಂದೂ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ...