ಬೆಂಗಳೂರು.ಜು,14:ದ್ವಿತೀಯ
ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಒಂದೇ ರೀತಿಯ ಫಲಿತಾಂಶದೊಂದಿಗೆ ಈ ಎರಡು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.
ನಂತರದ ಸ್ಥಾನವನ್ನು ಕ್ರಮವಾಗಿ ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಪಡೆದುಕೊಂಡಿದೆ.ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಒಟ್ಟಾರೆ ಶೇಕಡ 61.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 68.68 ರಷ್ಟಿತ್ತು.
ಮಾರ್ಚ್ 4ರಿಂದ 21ರವರೆಗೆ ಪರೀಕ್ಷೆ ನಡೆದಿತ್ತು. ಈ ನಡುವೆ ಲಾಕ್‌ಡೌನ್ ಜಾರಿಯಾದ ಹಿನ್ನೆಲೆ ಮುಂದೂಡಲಾಗಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿತ್ತು. 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ 61.80ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿ ಬಾಲಕಿಯರು ಶೇ 68.73, ಬಾಲಕರು ಶೇ 54.77ರ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ.
ಉಡುಪಿ ಜಿಲ್ಲೆ ಶೇ 90.71 ತೇರ್ಗಡೆಯ ಪ್ರಮಾಣದೊಂದಿಗೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ 90.71 ತೇರ್ಗಡೆ ಪ್ರಮಾಣದೊಂದಿಗೆ ದ್ವಿತೀಯ, ಕೊಡಗು ಶೇ 81.53 ತೇರ್ಗಡೆ ಪ್ರಮಾಣದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ. ವಿಜಯಪುರ ಶೇ 54.22 ರಷ್ಟು ಫಲಿತಾಂಶ ಪಡೆದಿದ್ದು ಕೊನೆಯ ಸ್ಥಾನ ಪಡೆದಿದೆ.
ರಾಜ್ಯದ 4 ಸರ್ಕಾರಿ ಕಾಲೇಜು ಸೇರಿ 92 ಕಾಲೇಜುಗಳು ಶೇ 100 ಫಲಿತಾಂಶ ಪಡೆದಿವೆ. 10 ಸರ್ಕಾರಿ ಕಾಲೇಜು ಸೇರಿ 88 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ.
ಒಟ್ಟು 68,866 ಮಂದಿ ಉನ್ನತ ಶ್ರೇಣಿ (ಡಿಸ್ಟಿಂಕ್ಷನ್), 2,21,866 ಮಂದಿ ಪ್ರಥಮ ದರ್ಜೆ, 77,455 ಮಂದಿ ದ್ವಿತೀಯ ದರ್ಜೆ, 49,110 ಮಂದಿ ಶೇ 50ಕ್ಕಿಂತ ಕಡಿಮೆ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶವನ್ನು ಪದವಿ ಪೂರ್ಣ ಶಿಕ್ಷಣ ಇಲಾಖೆಯ ವೆಬ್‌ಸೈಟ್ www.pue.kar.nic.in ಮತ್ತು www.karresults.nic.in ರಲ್ಲಿ ನೋಡಬಹುದು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ