janadhvani

Kannada Online News Paper

ಜೈಪುರ್: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಇಂದು(ಬುಧವಾರ) ಹಮ್ಮಿಕೊಳ್ಳಲಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ.

ಕಾರಣಾಂತರಗಳಿಂದ ಇಂದಿನ ಪತ್ರಿಕಾಗೋಷ್ಠಿಯನ್ನು ಮುಂದೂಡಲಾಗಿದೆ ಎಂದು ಸಚಿನ್ ಪೈಲಟ್ ಬೆಂಲಿಗರು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿನ್ ಪೈಲಟ್, ತಾವು ಇನ್ನೂ ಕಾಂಗ್ರೆಸ್‌ನಲ್ಲೇ ಇರುವುದಾಗಿ ಹೇಳಿದ್ದಾರೆ.

ಪಕ್ಷದ ವರಿಷ್ಠರಿಗೆ ನನ್ನ ಮೇಲಿನ ನಂಬಿಕೆ ಕಡಿಮೆಯಾಗಲಿ ಎಂದು ಕೆಲವರು ಹುನ್ನಾರ ನಡೆಸುತ್ತಿದ್ದು, ಇದೇ ಕಾರಣಕ್ಕೆ ತಾವು ಬಿಜೆಪಿ ಸೇರುತ್ತಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸಚಿನ್ ಪೈಲಟ್ ಕಿಡಿಕಾರಿದ್ದಾರೆ.ಪಕ್ಷದ ಉನ್ನತ ನಾಯಕರು ತಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳಲಿ ಎಂದೇ ಕೆಲವರು ಇಂತಹ ವದಂತಿ ಹಬ್ಬಿಸುತ್ತಿದ್ದು, ತಾವಿನ್ನೂ ಕಾಂಗ್ರೆಸ್‌ನಲ್ಲೇ ಇರುವುದಾಗಿ ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದಾರೆ.

error: Content is protected !! Not allowed copy content from janadhvani.com