janadhvani

Kannada Online News Paper

ಬೆಂಗಳೂರು: ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ – ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಗುರುವಾರ ಚಿನ್ನ ಹಾಗೂ ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ದೇಶದಲ್ಲಿ ಗ್ರಾಂ ಚಿನ್ನಕ್ಕೆ 4,791ರೂ ದಾಖಲಾಗಿದೆ. ಇನ್ನು, ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ 4,628ರೂ. ಆಗುವ ಮೂಲಕ ಏರಿಕೆ ಕಂಡಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ 50,030ರೂ ದಾಖಲಾಗಿದ್ದು, ಬೆಲೆ ಹೆಚ್ಚಾಗಿದೆ.

ರಾಜಧಾನಿ ದಿಲ್ಲಿಯಲ್ಲಿ 22 ಕ್ಯಾರಟ್‌ ಚಿನ್ನದ ದರವು 10 ಗ್ರಾಮ್‌ಗೆ 47,760 ರೂ. ಮುಟ್ಟಿದೆ. ಬೆಳ್ಳಿ ದರವು 50,030ರೂ.ಗೆ ತಲುಪಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ
ಚಿನ್ನದ ಬೆಲೆ 46,510 ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 50,030ರೂ. ಆಗಿದೆ.

ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 47,910 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 50,030ರೂಪಾಯಿ ಇದೆ.

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 48,360 ರೂಪಾಯಿ ದಾಖಲಾಗಿದೆ. ಬೆಳ್ಳಿ ದರ 50,030ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 47,140 ರೂ ದಾಖಲಾಗಿದೆ. ಒಂದು ಕೆ.ಜಿ. ಬೆಳ್ಳಿ ದರ 50,030ರೂಪಾಯಿ ಇದೆ.

error: Content is protected !! Not allowed copy content from janadhvani.com