ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದ ವಿವಿಧೆಡೆಯ ಐದು ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದರು.
ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯ ಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದು ಅವರು ಹೇಳಿದರು.
ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು,8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ಅವರು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ