janadhvani

Kannada Online News Paper

ಕೋವಿಡ್-19: VTU ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಆದೇಶ- ಗೊಂದಲ

ಬೆಂಗಳೂರು: ಕೋವಿಡ್ 19 ವ್ಯಾಪಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ, ಕಾಲೇಜುಗಳನ್ನು ಮುಚ್ಚಲಾಗಿದ್ದು, ಕೆಲವು ಕಾಲೇಜಿನಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ.

ಕೊರೋನಾ ಸಾಂಕ್ರಾಮಿಕ ರೋಗವು ದಿನೇನೆ ಹೆಚ್ಚುತ್ತಿರುವುದರಿಂದ ಜನ ಸಾಮಾನ್ಯರು ಮನೆಯಿಂದ ಹೊರಡಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದ ಸರ್ಕಾರದ ನಿಲುವಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದ್ಯ ಶಾಲೆ ಆರಂಭಿಸುವುದಿಲ್ಲ ಎಂದು ಸಂಬಂಧಪಟ್ಟ ಸಚಿವರು ತಿಳಿಸಿದ್ದಾರೆ.

VTU ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ನಿರ್ದೇಶ:

ಇದೀಗ ಕಾಲೇಜು ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ನಡೆಸುವಂತೆ ಆದೇಶ ಬಂದಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(VTU) ವಿದ್ಯಾರ್ಥಿಗಳು ಆಗಸ್ಟ್ 1 ರಿಂದ 15 ರವರೆಗೆ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಸಂದೇಶವನ್ನು ರವಾನಿಸಲಾಗಿದೆ.

ತರಗತಿಗೆ ಹಾಜರಾಗಿ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದರೆ ಕಾಲೇಜು ಯಾವುದೇ ಜವಾಬ್ದಾರಿಯನ್ನು ಹೊಂದುವುದಿಲ್ಲ ಎಂಬ ಭರವಸೆ ಪತ್ರಕ್ಕೆ ಸಹಿ ಹಾಕುವಂತೆ ವಿದ್ಯಾರ್ಥಿಗಳನ್ನು ಕೇಳಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ಆರೋಪಿಸಲಾಗಿದೆ.

ಅದೂ ಅಲ್ಲದೇ,ನೀಡಲಾಗಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಎಡೆಬಿಡದೆ ನಿರಂತರ ಪರೀಕ್ಷೆಯನ್ನು ನಡೆಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಿದ್ಯಾರ್ಥಿಗಳ ಗೊಂದಲವನ್ನು ನಿವಾರಿಸಲು ಮುಂದಾಗಬೇಕಿದೆ.

error: Content is protected !! Not allowed copy content from janadhvani.com