ಕೊಲ್ಲಿಯಲ್ಲಿ ಕಳೆದ 24 ಗಂಟೆಗಳಲ್ಲಿ, ಕೋವಿಡ್ ಮರಣ ಮತ್ತು ರೋಗಿಗಳ ಸಂಖ್ಯೆ ಕಡಿಮೆಯಾಗಿದೆ. 47 ಮರಣ ವರದಿಯಾಗಿದ್ದು, ಕೊಲ್ಲಿಯಲ್ಲಿ ಒಟ್ಟು ಮರಣ ಸಂಖ್ಯೆ 4048 ಕ್ಕೆ ಏರಿದೆ. ಹೊಸ ಪ್ರಕರಣಗಳ ಸಂಖ್ಯೆ 5,000 ಕ್ಕಿಂತ ಕಡಿಮೆ.
ಸೌದಿ ಅರೇಬಿಯಾದಲ್ಲಿ 34, ಒಮಾನ್ನಲ್ಲಿ ಆರು, ಕುವೈತ್ನಲ್ಲಿ ನಾಲ್ಕು, ಬಹ್ರೇನ್ನಲ್ಲಿ ಎರಡು ಮತ್ತು ಕತಾರ್ನಲ್ಲಿ ಒಂದು ಮರಣ ಸಂಭವಿಸಿದ್ದು, ಯುಎಇಯಲ್ಲಿ ಯಾವುದೇ ಹೊಸ ಮರಣ ದೃಢಪಟ್ಟಿಲ್ಲ. ಕೊಲ್ಲಿಯಲ್ಲಿ ಒಟ್ಟು ರೋಗಿಗಳ ಸಂಖ್ಯೆ ಆರು ಲಕ್ಷವನ್ನು ತಲುಪಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ ಐದು ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ ಸೌದಿ ಅರೇಬಿಯಾ ಮತ್ತು ಒಮಾನ್ನಲ್ಲಿ ರೋಗಿಗಳ ಸಂಖ್ಯೆ ಇಳಿಕೆಯಾಗಿದೆ.
ಕತಾರ್ನಲ್ಲಿ ಶಾಲೆಗಳನ್ನು ತೆರೆಯಲು ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶೈಕ್ಷಣಿಕ ವರ್ಷವು ಮೂರು ಹಂತಗಳಲ್ಲಿ ಪ್ರಾರಂಭವಾಗಲಿದೆ. ಮೂರನೇ ಹಂತದಿಂದ ಅಧ್ಯಯನವು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಳ್ಳಲಿದೆ.
ಕೋವಿಡ್ ಸಂದರ್ಭದಲ್ಲಿ ಬಕ್ರೀದ್ ಹಬ್ಬ ಆಚರಣೆಗೆ ವಿವಿಧ ದೇಶಗಳು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಘೋಷಿಸಿವೆ. ಈದ್ಗಾ ಮತ್ತು ಮಸೀದಿಗಳಲ್ಲಿ ಈದ್ ಪ್ರಾರ್ಥನೆ ಇರುವುದಿಲ್ಲ. ಬಲಿದಾನಕ್ಕೂ ನಿಯಂತ್ರಣ ಹೇರಲಾಗಿದೆ.
ಈ ಮಧ್ಯೆ, ಸೌದಿ ಅರೇಬಿಯಾವು ದೇಶೀಯರಿಗೆ ಮತ್ತು ಅವರ ಅವಲಂಬಿತರಿಗೆ ರಸ್ತೆ ಮಾರ್ಗ ದೇಶಕ್ಕೆ ಹಿಂದಿರುಗುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಯುಎಇ, ಕುವೈತ್ ಮತ್ತು ಬಹ್ರೇನ್ನಿಂದ ಮಾತ್ರ ಮೊದಲ ಹಂತದಲ್ಲಿ ಮರಳಲು ಅವಕಾಶವಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ