janadhvani

Kannada Online News Paper

ಕಾಸರಗೋಡು ಮದುವೆಯಲ್ಲಿ ಭಾಗವಹಿಸಿದ್ದ 43 ಜನರಿಗೆ ಕೋವಿಡ್ ದೃಢ

ಕಾಸರಗೋಡು: ಜಿಲ್ಲೆಯ ಚೆಂಗಳ ಗ್ರಾಮ ಪಂಚಾಯಿತಿ ನಾಲ್ಕನೇ ವಾರ್ಡ್‌ನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರ ವಿವಾಹ ಇದೇ 17 ರಂದು ನಡೆದಿದ್ದು, ಈ ಸಮಾರಂಭದಲ್ಲಿ ಭಾಗವಹಿಸಿದ್ದ 43 ಜನರಿಗೆ ಕೋವಿಡ್–19 ದೃಢವಾಗಿದೆ. ಭಾಗವಹಿಸಿದ್ದ ಎಲ್ಲರೂ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು ಸೂಚನೆ ನೀಡಿದ್ದಾರೆ.

ನಿಷೇಧಾಜ್ಞೆ ಜಾರಿ: ಕಾಸರಗೋಡು ಜಿಲ್ಲೆಯ 5 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರ (ಇದೇ 25) ರಾತ್ರಿ 12 ಗಂಟೆಯಿಂದ 144 ನೇ ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಜೇಶ್ವರ, ಕುಂಬಳೆ, ಕಾಸರಗೋಡು, ಹೊಸದುರ್ಗ, ನೀಲೇಶ್ವರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ.ಸಜಿತ್‌ ಬಾಬು, ಈ ಠಾಣೆಗಳ ವ್ಯಾಪ್ತಿಯಲ್ಲಿ ದಿನ ಬಿಟ್ಟು ದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದು ಎಂದು ತಿಳಿಸಿದ್ದಾರೆ.

error: Content is protected !! Not allowed copy content from janadhvani.com