ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುರೆಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,661 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ 705 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 32,063ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.13,85,522 ಮಂದಿ ಸೋಂಕಿತರ ಪೈಕಿ 8,85,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,67,882 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,42,263 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.26ರವರೆಗೂ 1,62,91,331 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ