janadhvani

Kannada Online News Paper

ಟಿಪ್ಪು ಸುಲ್ತಾನ್ ಪಠ್ಯ ಕೈಬಿಟ್ಟಿರುವ ನಿರ್ಧಾರ ಹಿಂಪಡೆಯುವಂತೆ ಕೆಸಿಎಫ್ ಒಮಾನ್ ಆಗ್ರಹ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳ ಪಠ್ಯದ ಹೊರೆ ಕಡಿಮೆ ಮಾಡಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡು ಶಾಲಾ ಮಕ್ಕಳ ಪಠ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ , ಅಪ್ರತಿಮ ದೇಶಭಕ್ತ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಪಠ್ಯ ಪುಸ್ತಕದಿಂದ ಕೈಬಿಡಲು ಮುಂದಾಗಿರುವುದು ವಿಷಾದನೀಯ. ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರ ಈ ರೀತಿಯ ಕೇಸರೀಕರಣ ಮತ್ತು ಕೋಮುವಾದದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬದಲು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಗಮನಹರಿಸುವುದು ಸೂಕ್ತ.

ಟಿಪ್ಪು ಸುಲ್ತಾನ್ ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ . ಅವರು ಈ ದೇಶದ ಇತಿಹಾಸದ ಭಾಗವಾಗಿದ್ದಾರೆ. ಟಿಪ್ಪು ಅವರ ಹೆಸರಿಲ್ಲದೆ
ದೇಶದ ಚರಿತ್ರೆ ಅಪೂರ್ಣವಾಗುತ್ತದೆ .

ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಅಪಾರವಾಗಿದೆ . ನಮ್ಮ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಅವರು ಕರ್ನಾಟಕ ವಿಧಾನಮಂಡಲದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದಾಗ ಟಿಪ್ಪು ಸುಲ್ತಾನ್ ಅವರು ರಾಜ್ಯಕ್ಕೆ ನೀಡಿದ ಕೊಡುಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವನ್ನು ಕೊಂಡಾಡಿದ್ದಾರೆ.

ಟಿಪ್ಪು ಸುಲ್ತಾನ್ ಅವರನ್ನು ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ .ಈ ಸಂದರ್ಭದಲ್ಲಿ ಸರ್ಕಾರವು ತನ್ನ ರಾಜಕೀಯ ಉದ್ದೇಶ ಈಡೇರಿಸಿಕೊಳ್ಳಲು ಇತಿಹಾಸವನ್ನು ತಿರುಚಲು ಮುಂದಾಗಿರುವುದು ಖಂಡನೀಯ. ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆದು , ಶಾಲಾ ಮಕ್ಕಳ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ಪಾಠಗಳನ್ನು ಮುಂದುವರಿಸಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯೂ ಮಾನ್ಯ ಮುಖ್ಯಮಂತ್ರಿ ಗಳಲ್ಲಿ ಆಗ್ರಹಿಸಿದ್ದಾರೆ.

error: Content is protected !! Not allowed copy content from janadhvani.com